ಕರ್ನಾಟಕ

karnataka

ETV Bharat / city

ಸಂತೋಷ್​ ಪಾಟೀಲ್ ಆತ್ಮಹತ್ಯೆ ಪ್ರಕರಣ.. ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ: ಬಿಎಸ್​ವೈ - Belagavi contractor Santosh Patil suicide case

ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಬಿಎಸ್​ವೈ, ತನಿಖೆ ಮಾಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ತನಿಖೆ ವರದಿ ಬಂದ ಬಳಿಕ ವಾಸ್ತವಿಕ ಸತ್ಯ ಹೊರಬರಲಿದೆ ಎಂದು ಹೇಳಿದರು.

Former CM BS Yediyurappa
ಮಾಜಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ

By

Published : Apr 13, 2022, 10:06 AM IST

Updated : Apr 13, 2022, 11:20 AM IST

ಬೆಳಗಾವಿ:ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ. ಈಶ್ವರಪ್ಪ ಅವರು ನನಗೆ ಏನು ಸಂಬಂಧ ಇಲ್ಲ ಅಂತಾ ಹೇಳಿದ್ದಾರೆ. ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ತನಿಖೆಯ ವರದಿ ಬಂದ ಬಳಿಕ ವಾಸ್ತವಿಕ ಸತ್ಯ ಹೊರಬರಲಿದೆ. ನಾನು ಕೂಡ ಸಿಎಂ ಜತೆ ಮಾತನಾಡಿದ್ದೇನೆ. ಅವರು ಕೂಡ ತನಿಖೆ ಆಧರಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು. ಚುನಾವಣೆ ಇನ್ನೂ ಒಂದು ವರ್ಷ ಇದೆ. ಹೀಗಾಗಿ ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದು ಇದೇ ವೇಳೆ ತಿಳಿಸಿದರು.

ಖಾಸಗಿ ಹೋಟೆಲ್​​ನಲ್ಲಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಇದಕ್ಕೂ ಮುನ್ನ ಬೆಳಗಾವಿ ಖಾಸಗಿ ಹೋಟೆಲ್​​ನಲ್ಲಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಮಾಡಿ ಸಂತೋಷ್​ ಪಾಟೀಲ್​​ ಆತ್ಮಹತ್ಯೆ ಪ್ರಕರಣ ಕುರಿತು ಚರ್ಚೆ ನಡೆಸಿದರು ಎಂಬ ಮಾಹಿತಿ ಲಭ್ಯವಾಗಿದೆ. ಬಳಿಕ ಇದೇ ವೇಳೆ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ಹಾಸ್ಟೆಲ್ ಉದ್ಘಾಟನೆಗೆ ಆಹ್ವಾನ ಕೊಟ್ಟಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರನ್ನು ಕರೆದುಕೊಂಡು ಹೋಗಲು ಶಾಸಕಿ ಹೆಬ್ಬಾಳ್ಕರ್ ಆಗಮಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಸಂತೋಷ್​ ಪಾಟೀಲ್ ಆತ್ಮಹತ್ಯೆ ಪ್ರಕರಣ: ಉಡುಪಿಯ ಲಾಡ್ಜ್‌ಗೆ ಆಗಮಿಸಿದ ಕುಟುಂಬಸ್ಥರು

Last Updated : Apr 13, 2022, 11:20 AM IST

ABOUT THE AUTHOR

...view details