ಬೆಳಗಾವಿ :ಜಿಲ್ಲೆಯಲ್ಲಿ ಜನಪ್ರತಿನಿಧಿಗಳು ಕೊರೊನಾ ರೂಲ್ಸ್ ಬ್ರೇಕ್ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಅವರ ಮಕ್ಕಳ ಸರದಿ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಪುತ್ರ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ ಆರೋಪ ಕೇಳಿ ಬಂದಿದೆ.
ಗೋಕಾಕ್ ಕ್ಷೇತ್ರದಲ್ಲಿ ಮಾಜಿ ಸಚಿವರ ಅನುಪಸ್ಥಿತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಅಮರನಾಥ ಜಾರಕಿಹೊಳಿ ಚಾಲನೆ ನೀಡಿದರು. ಈ ವೇಳೆ ನೂರಾರು ಜನರು ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಭಾಗವಹಿಸಿದ್ದರು.