ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದಲ್ಲಿ ಬೀದಿ ನಾಯಿ ದಾಳಿಯಿಂದ ನಾಲ್ಕು ವರ್ಷದ ಮಗು ಸಾವನ್ನಪ್ಪಿದೆ. ಸೌಜನ್ಯ ಮಲ್ಲಪ್ಪ ಮುತ್ತೂರ ಮೃತ ಬಾಲಕಿ.
ಮುಂಜಾನೆ ಮನೆಯ ಮುಂದೆ ಆಟವಾಡುತ್ತಿದ್ದ ಸಮಯದಲ್ಲಿ ನಾಯಿ ದಾಳಿ ಮಾಡಿ ಮಗುವನ್ನು ತೀವ್ರವಾಗಿ ಗಾಯಗೊಳಿಸಿದೆ. ಅಲ್ಲೇ ಇದ್ದ ಸ್ಥಳೀಯರು ಮಗುವನ್ನು ನಾಯಿಯಿಂದ ಬಿಡಿಸಿ ಅಥಣಿ ಸಮುದಾಯ ಆಸ್ಪತ್ರೆಗೆ ಕರೆದೊಂಡು ಹೋಗಲು ಮುಂದಾಗಿದ್ದು, ಮಾರ್ಗ ಮಧ್ಯದಲ್ಲೇ ಮಗು ಅಸುನೀಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.