ಬೆಳಗಾವಿ: ಆಗಸ್ಟ್ 24 ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ಇನ್ನು ಪ್ರಗತಿಯಲ್ಲಿದೆ. ಈ ಘಟನೆಯ ನೆನಪು ಮಾಸುವ ಮುನ್ನವೇ ಬೆಳಗಾವಿಯಲ್ಲಿ ಇಂತಹ ಮತ್ತೊಂದು ಹೇಯ ಕೃತ್ಯ ನಡೆದಿರುವುದು ವರದಿಯಾಗಿದೆ. ಆದರೆ, ದೂರು ದಾಖಲಾಗಿ 10 ಗಂಟೆಯೊಳಗೆ ಕಾಮುಕರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
20 ದಿನಗಳ ಹಿಂದೆ ಗೋಕಾಕ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು 15 ವರ್ಷದ ಅಪ್ರಾಪ್ತೆ ಮೇಲೆ ಕಾಮುಕರು ಗ್ಯಾಂಗ್ ರೇಪ್ ನಡೆಸಿದ್ದರು. ಮೂವರಿಂದ ನಾಲ್ವರು ಯುವಕರಿಂದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದ್ದು, ಯಾರಿಗಾದರೂ ಹೇಳಿದರೆ ಪ್ರಾಣ ತೆಗೆಯುವ ಬೆದರಿಕೆ ಹಾಕಿ ಪರಾರಿಯಾಗಿದ್ದರು.