ಬೆಳಗಾವಿ: ಜಿಲ್ಲೆಗೆ ಅಗತ್ಯವಿರುವ ಕೋವಿಡ್ ಲಸಿಕೆ ಪೂರೈಕೆಯಾದ ತಕ್ಷಣವೇ ಈಗಾಗಲೇ ಮೊದಲ ಡೋಸ್ ಪಡೆದುಕೊಂಡವರಿಗೆ ಆದ್ಯತೆ ಮೇರೆಗೆ ಎರಡನೇ ಡೋಸ್ ನೀಡಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮ ಕಿತ್ತೂರಿನ ಕೋಟೆ ಆವರಣದಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊದಲ ಡೋಸ್ ಲಸಿಕೆ ಪಡೆದುಕೊಂಡಿರುವವರು ಲಸಿಕೆಯ ನಿರೀಕ್ಷೆಯಲ್ಲಿದ್ದಾರೆ.
ಆದ್ದರಿಂದ ಲಸಿಕೆ ಸರಬರಾಜು ಆದ ಕೂಡಲೇ ಅವರಿಗೆ ಲಸಿಕೆ ನೀಡಬೇಕು. ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಪ್ರತಿ ತಾಲೂಕಿನಲ್ಲಿ ಮಾದರಿ ತಪಾಸಣಾ ಪ್ರಮಾಣ ಹೆಚ್ಚಿಸುವ ಮೂಲಕ ಸೋಂಕಿತರನ್ನು ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ಅಥವಾ ಹೋಮ್ ಐಸೋಲೇಷನ್‌ಗೆ ಕ್ರಮಕೈಗೊಳ್ಳಬೇಕು ಎಂದರು.