ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭಾರತದ ಮಿನಿ ನಯಾಗರ ಎಂದೇ ಖ್ಯಾತಿ ಪಡೆದಿರುವ ಜಿಲ್ಲೆಯ ಗೋಕಾಕ್ ನಗರದಿಂದ ಎಂಟು ಕಿ.ಮೀ. ದೂರದಲ್ಲಿರುವ ಗೋಕಾಕ್ ಫಾಲ್ಸ್ ಧುಮ್ಮಿಕ್ಕಿ ಹರಿಯುತ್ತಿದೆ. ಇದರ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಧುಮ್ಮಿಕ್ಕಿ ಹರಿಯುತ್ತಿರೋ ಗೋಕಾಕ್ ಫಾಲ್ಸ್... ಜಲಪಾತದ ರುದ್ರರಮಣೀಯ ದೃಶ್ಯ ನೋಡಿ - ಗೋಕಾಕ್ ಫಾಲ್ಸ್
ಭಾರತದ ಮಿನಿ ನಯಾಗರ ಎಂದೇ ಖ್ಯಾತಿ ಪಡೆದಿರುವ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ಈ ಧುಮ್ಮಿಕ್ಕಿ ಹರಿಯುತ್ತಿದೆ.
ಬೆಳಗಾವಿ: ಧುಮ್ಮಿಕ್ಕಿ ಹರಿಯುತ್ತಿರೋ ಗೋಕಾಕ್ ಜಲಪಾತ
ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಜಲಾಶಯದಿಂದ ಘಟಪ್ರಭಾ ನದಿಗೆ 40 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಗೋಕಾಕ್ ಜಲಪಾತ ಮೈದುಂಬಿ ಹರಿಯುತ್ತಿದ್ದು, ಮತ್ತೆ ಪ್ರವಾಹದ ಭೀತಿ ಎದುರಾಗಿದೆ.
ಜಲಪಾತ ಕಣ್ತುಂಬಿಕೊಳ್ಳಲು ಪ್ರತಿವರ್ಷ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ಈ ಬಾರಿ ಕೊರೊನಾ ಭೀತಿಯಿಂದಾಗಿ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.