ಬೆಳಗಾವಿ:ಜಿಲ್ಲೆಯ ಗೋಕಾಕ್ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ತಹಶೀಲ್ದಾರ್ ಕಚೇರಿಯನ್ನ ಸೀಲ್ ಡೌನ್ ಮಾಡಲಾಗಿದೆ.
ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ: ಗೋಕಾಕ್ ತಹಶೀಲ್ದಾರ್ ಕಚೇರಿ ಸೀಲ್ ಡೌನ್ - ಗೋಕಾಕ್ ತಹಶೀಲ್ದಾರ್ ಕಚೇರಿ ಸೀಲ್ಡೌನ್
ಬೆಳಗಾವಿ ಜಿಲ್ಲೆಯ ಗೋಕಾಕ್ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ 36 ವರ್ಷದ (P-28358) ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ತಹಶೀಲ್ದಾರ್ ಕಚೇರಿಯನ್ನ ಸೀಲ್ ಡೌನ್ ಮಾಡಲಾಗಿದೆ.

ಗೋಕಾಕ್ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ 36 ವರ್ಷದ (P-28358) ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಹೀಗಾಗಿ ತಹಶೀಲ್ದಾರ್ ಕಚೇರಿಯನ್ನ ಸೀಲ್ ಡೌನ್ ಮಾಡಲಾಗಿದೆ. ತಾಲೂಕಿನಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ನಗರದಲ್ಲಿ ಸೀಮಿತ ಅವಧಿಯ ವಹಿವಾಟಿಗೆ ಮಾತ್ರ ಆದೇಶ ನೀಡಲಾಗಿದ್ದು, ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ.
ಮಧ್ಯಾಹ್ನ 1 ಗಂಟೆಯಿಂದ ಬೆಳಗ್ಗೆ 5ರವರೆಗೆ ಷರತ್ತುಬದ್ಧ ಲಾಕ್‌ಡೌನ್ ಜಾರಿ ಮಾಡಲಾಗಿದ್ದು, ಇಂದಿನಿಂದ ಜುಲೈ 13ರವರೆಗೆ ಸೀಮಿತ ಅವಧಿಗೆ ವಹಿವಾಟು ನಡೆಸಲು ಆದೇಶ ನೀಡಲಾಗಿದೆ.