ಬೆಳಗಾವಿ:ಪೊಲೀಸರಿಂದಲೇ ಸ್ಮಗ್ಲಿಂಗ್ ಆಗುತ್ತಿದ್ದ ಚಿನ್ನ ಕಳ್ಳತನ ಪ್ರಕರಣದ ಪ್ರಮುಖ ಆರೋಪಿ ಕಿರಣ್ ವೀರನಗೌಡರಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬೆಳಗಾವಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಸದ್ಯ ಸಿಐಡಿ ವಶದಲ್ಲಿರುವ ಹುಬ್ಬಳ್ಳಿ ಮೂಲದ ಕಿರಣ್ ವೀರನಗೌಡರಗೆ ಜಾಮೀನು ಮಂಜೂರು ಮಾಡಿ ನ್ಯಾಯಾಧೀಶ ಎನ್.ವಿ.ವಿಜಯ್ ಆದೇಶ ಹೊರಡಿಸಿದ್ದಾರೆ. 3 ಲಕ್ಷ ವೈಯಕ್ತಿಕ ಬಾಂಡ್ ಹಾಗೂ 15 ದಿನಕ್ಕೊಮ್ಮೆ ಸಿಐಡಿ ತನಿಖೆಗೆ ಹಾಜರಾಗಬೇಕು ಎಂದು ಆರೋಪಿಗೆ ನ್ಯಾಯಾಲಯ ಸೂಚನೆ ನೀಡಿದೆ.
ಚಿನ್ನ ಕಳ್ಳತನ ಪ್ರಕರಣದಲ್ಲಿ ಮಿಡಿಯೇಟರ್ ಆಗಿ ಕೆಲಸ ಮಾಡಿದ್ದ ಕಿರಣ್ನನ್ನು ಸಿಐಡಿ ಅಧಿಕಾರಿಗಳು ಜೂನ್ 6ರಂದು ಹುಬ್ಬಳ್ಳಿಯಲ್ಲಿ ವಶಕ್ಕೆ ಪಡೆದಿದ್ದರು. ಬಳಿಕ ಸಿಐಡಿ ವಶದಲ್ಲಿದ್ದು, ಕಿರಣ್ ವೀರನಗೌಡರ ತನಿಖೆ ಎದುರಿಸುತ್ತಿದ್ದಾನೆ. ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದ ಈ ಪ್ರಕರಣದಲ್ಲಿ ನಿಕಟಪೂರ್ವ ಐಜಿಪಿ ಸೇರಿ ಹಲವು ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಆರೋಪಗಳಿವೆ.
ಇದನ್ನೂ ಓದಿ:ಕೊರೊನಾ ಸಂತ್ರಸ್ತರಿಗೆ ಪರಿಹಾರ: 6 ವಾರಗಳಲ್ಲಿ ಮಾರ್ಗಸೂಚಿ ರೂಪಿಸಲು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ