ಬೆಳಗಾವಿ :ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿಗಳು ಭಾಗಿಯಾಗುವ ಮೂಲಕ ಸರ್ಕಾರಿ ನಿಯಮ ಉಲ್ಲಂಘನೆ ಮಾಡಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಪ್ರಶಾಂತ ಬುರ್ಗೆ ಎಂಬುವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಏ.19ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕ್ರಮ ನಡೆದಿತ್ತು. ಅಂದಿನ ಕಾರ್ಯಕ್ರಮದಲ್ಲಿ ನಿಪ್ಪಾಣಿ ತಹಶೀಲ್ದಾರ್ ಮೋಹನ್ ಭಸ್ಮೆ, ಬಿಇಒ ರೇವತಿ ಮಠದ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಮಿತ್ರಾ ಡಿ. ಬಿ ಭಾಗಿಯಾಗಿದ್ದರು.