ಚಿಕ್ಕೋಡಿ: ಕಾಗವಾಡ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಡಿಸಿಎಂ ಲಕ್ಷ್ಮಣ ಸವದಿ, ಜವಳಿ ಸಚಿವ ಶ್ರೀಮಂತ ಪಾಟೀಲ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಚಾಲನೆ ನೀಡಿದರು.
ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ಶ್ರೀಮಂತ ಪಾಟೀಲ, ಗ್ರಾಮ ಪಂಚಾಯತ್ ಪೂರ್ಣ ಜವಾಬ್ದಾರಿ ಪ್ರತಿ ಗ್ರಾಪಂ ಸದಸ್ಯನಿಗೆ ಸೇರಿದೆ.
ಪ್ರತಿ ಕಾಮಗಾರಿಗಳ ಬಗ್ಗೆ ನಿಗಾವಹಿಸ ಬೇಕಾಗಿರುವುದು ಗ್ರಾಪಂ ಸದಸ್ಯರ ಕೆಲಸ. ಒಂದು ವೇಳೆ ಕಳಪೆ ಕಾಮಗಾರಿ ಕಂಡು ಬಂದಲ್ಲಿ ಅದರ ಬಗ್ಗೆ ನಿಗಾವಹಿಸುವುದು ಸದಸ್ಯರ ಕರ್ತವ್ಯ ಎಂದರು.
ಕಾರ್ಯಕರ್ತರ ಮೇಲೆ ನಿಂತಿರುವ ಪಕ್ಷವೆಂದ್ರೆ ಬಿಜೆಪಿ :ಬಳಿಕ ಮಾತನಾಡಿದ ಲಕ್ಷ್ಮಣ ಸವದಿ, ಸಮಿಶ್ರ ಸರ್ಕಾರಕ್ಕೆ ಬೇಸತ್ತು ಶ್ರೀಮಂತ ಪಾಟೀಲ ರಾಜೀನಾಮೆ ನೀಡಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು. ಸೋತವರನ್ನು ತಂದು ಮಂತ್ರಿ ಮಾಡತ್ತಾರೆ ಎನ್ನುವುದು ನಮ್ಮ ಕಾರ್ಯಕರ್ತರಿಗೆ ಗೊತ್ತಾಗಲಿ ಎಂದು ನಿಮಗೆ ಹೇಳುತ್ತಿದ್ದೇನೆ ಎಂದರು.
ಬಸ್ ಟಿಕೆಟ್ ದರ ಹೆಚ್ಚಿಗೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಈಗಾಗಲೇ ಕೊರೊನಾದಿಂದ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸಿದ್ದಾರೆ. ಯಾವುದೇ ತೆರನಾಗಿ ಮೂರು ನಿಗಮಗಳಲ್ಲಿ ಟಿಕೆಟ್ ದರ ಹೆಚ್ಚಿಗೆ ಮಾಡುವುದಿಲ್ಲ. ಕಳೆದ ಬಾರಿ 12 ಪ್ರತಿಷತ ಟಿಕೆಟ್ ದರ ಹೆಚ್ಚಿಗೆ ಮಾಡಿದ್ದೇವೆ. ಈ ಸಲ ಟಿಕೆಟ್ ದರ ಹೆಚ್ಚು ಮಾಡುವ ಪ್ರಸ್ತಾಪ ಇಲ್ಲ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.
ಬೆಳವಡಿ ಮಲ್ಲಮ್ಮ ಉತ್ಸವ :ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿಯಲ್ಲಿ ಬೆಳವಡಿ ಮಲ್ಲಮ್ಮ ಉತ್ಸವವನ್ನು ಜಿಲ್ಲಾಡಳಿತದಿಂದ ಸರಳ ಮತ್ತು ಸಾಂಪ್ರದಾಯಿಕ ರೀತಿ ಆಚರಿಸಲಾಯಿತು.
ಈ ವೇಳೆ ಸೋಂದಾದಿಂದ ಆಗಮಿಸಿದ ವೀರಜ್ಯೋತಿಯನ್ನು ಶಾಸಕ ಮಹಾಂತೇಶ ಕೌಜಲಗಿ ಮತ್ತಿತರೆ ಗಣ್ಯರ ಸಮ್ಮುಖದಲ್ಲಿ ಬರಮಾಡಿಕೊಂಡು ಪೂಜೆ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಬೆಳವಡಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು. ನಂತರ ಬೆಳವಡಿ ಮಲ್ಲಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.