ಚಿಕ್ಕೋಡಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚಿಕ್ಕೋಡಿಗೆ ಬಂದಿದ್ದು ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದಲಾ ಅಥವಾ ನೆರೆ ಸಂತ್ರಸ್ತರ ಕಣ್ಣೀರು ಒರೆಸೋಕಾ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಹೆಚ್ಡಿಕೆ ಚಿಕ್ಕೋಡಿ ಭೇಟಿ ಉದ್ದೇಶ ಮರೆತರಾ ಜೆಡಿಎಸ್ ಕಾರ್ಯಕರ್ತರು? - ಚಿಕ್ಕೋಡಿಗೆ ಭೇಟಿ ನೀಡಿದ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚಿಕ್ಕೋಡಿಗೆ ಬಂದಿದ್ದು ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದಲಾ ಅಥವಾ ನೆರೆ ಸಂತ್ರಸ್ತರ ಕಣ್ಣೀರು ಒರೆಸೋಕಾ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ನೆರೆ ಸಂತ್ರಸ್ತರ ಬಗ್ಗೆ ಯೋಚನೆ ಮಾಡಬೇಕಾದ ಜೆಡಿಎಸ್ ಕಾರ್ಯಕರ್ತರು, ಮಾಜಿ ಶಾಸಕ ಕೋನರೆಡ್ಡಿ ನೇತೃತ್ವದಲ್ಲಿ ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಹ ಇನ್ನೂ ಹಾಜರಾಗಿರಲಿಲ್ಲ. ಪಕ್ಷ ಸಂಘಟನೆ, ಕಾರ್ಯಕರ್ತರನ್ನು ಸೇರಿಸುವ ವಿಚಾರವಾಗಿ ಕೋನರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಪಕ್ಷದ ಅಧ್ಯಕ್ಷರ ನೇಮಕ, ಬ್ಲಾಕ್ ಅಧ್ಯಕ್ಷರ ನೇಮಕದ ವಿಚಾರವಾಗಿ ಸಭೆ ನಡೆಯುತ್ತಿದ್ದು, ಮಾಧ್ಯಮ ಪ್ರತಿನಿಧಿಗಳಿಗೂ ಸಹ ಅವಕಾಶ ನೀಡಲಿಲ್ಲ. ಮಾಜಿ ಸಿಎಂ ಬಂದಿದ್ದು ನೆರೆ ಸಂತ್ರಸ್ತರ ಭೇಟಿಯಾಗಿ ಅವರ ನೋವಿಗೆ ಧ್ವನಿಯಾಗುವ ಉದ್ದೇಶದಿಂದ. ಆದರೆ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ನಡೆಯುತ್ತಿರುವ ಸಭೆಯೇ ಬೇರೆ ಎನ್ನಲಾಗುತ್ತಿದೆ. ಕುಮಾರಸ್ವಾಮಿ ಬಂದಿದ್ದು ಪಕ್ಷ ಸಂಘಟನೆಗಾ ಅಥವಾ ನೆರೆ ಸಂತ್ರಸ್ತರ ಕಣ್ಣೀರು ಒರೆಸೋಕಾ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.