ಕರ್ನಾಟಕ

karnataka

ETV Bharat / city

ಬೆಳಗಾವಿಯಲ್ಲಿ ರಣರಕ್ಕಸ ಮಳೆಗೆ ಜನರು ತತ್ತರ:  ಮತ್ತೇ ಎದುರಾದ ಪ್ರವಾಹ ಭೀತಿ

ಬೆಳಗಾವಿ ಜಿಲ್ಲೆಯಾದ್ಯಂತ ಸುರಿದ ರಣರಕ್ಕಸ ಮಳೆಯಿಂದಾಗಿ ಮಲಪ್ರಭಾ, ಘಟಪ್ರಭಾ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು, ಜಿಲ್ಲೆಯ ನದಿ ತೀರದ ಗ್ರಾಮಗಳು ಮೂರನೇ ಬಾರಿಗೆ ಪ್ರವಾಹದ ಭೀತಿ ಎದುರಿಸುತ್ತಿವೆ.

By

Published : Oct 20, 2019, 9:27 PM IST

ಬೆಳಗಾವಿಯಲ್ಲಿ ಮತ್ತೆ ಪ್ರವಾಹ ಭೀತಿ

ಬೆಳಗಾವಿ: ವಾಯುಭಾರ ಕುಸಿತದಿಂದ‌ ಬೆಳಗಾವಿ ಜಿಲ್ಲೆಯಾದ್ಯಂತ ಸುರಿದ ರಣರಕ್ಕಸ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ.

ಈಗಾಗಲೇ‌ ಕೃಷ್ಣಾ, ವೇದಗಂಗಾ, ದೂದಗಂಗಾ ನದಿಯ ನೆರೆಯಿಂದ ತತ್ತರಿಸಿರುವ ಚಿಕ್ಕೋಡಿ ಭಾಗದ ಜನರು, ಈಗ ಮತ್ತೆ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಹೈರಾಣಾಗಿದ್ದಾರೆ. ನಿಪ್ಪಾಣಿ ತಾಲೂಕಿನ ಆಡಿ ಗ್ರಾಮದಲ್ಲಿ ಹಳ್ಳದ ನೀರು ಸೃಷ್ಟಿಸಿದ ಅವಾಂತರದಿಂದಾಗಿ ಮನೆಗಳ ಮೊದಲ ಮಹಡಿ ಜಲಾವೃತವಾಗಿದ್ದು, ಇನ್ನೊಂದೆಡೆ ವಾಹನಗಳು ಕೊಚ್ಚಿ ಹೋಗಿ ಮೋರಿಯೊಳಗೆ ಬಿದ್ದಿವೆ.

ಬೆಳಗಾವಿಯಲ್ಲಿ ಮತ್ತೆ ಪ್ರವಾಹ ಭೀತಿ

ಇನ್ನು ಮಲಪ್ರಭಾ, ಘಟಪ್ರಭಾ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು, ಜಿಲ್ಲೆಯ ನದಿ ತೀರದ ಗ್ರಾಮಗಳು ಮೂರನೇ ಬಾರಿಗೆ ಪ್ರವಾಹದ ಭೀತಿ ಎದುರಿಸುತ್ತಿವೆ. ಬೆಳಗಾವಿ ತಾಲೂಕಿನ ಕಾಕತಿ ಮತ್ತು ವಂಟಮೂರಿ ಘಾಟ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.

ಸವದತ್ತಿ ತಾಲೂಕಿನ ನವಿಲುತೀರ್ಥ ಡ್ಯಾಂನಿಂದ ಮತ್ತೆ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ‌ ಮಾಡಲಾಗುತ್ತಿದೆ. ಹೀಗಾಗಿ ರಾಮದುರ್ಗ ತಾಲೂಕಿನ ಹೀರೆಹಂಪಿಹೊಳಿ, ಚಿಕ್ಕಹಂಪಿಹೊಳಿ, ಅವರಾದಿ ಗ್ರಾಮ ಸೇರಿದಂತೆ ಐದಕ್ಕೂ ಅಧಿಕ ಗ್ರಾಮಗಳಿಗೆ ಮುಳುಗಡೆಯ ಆತಂಕ ಸೃಷ್ಟಿಯಾಗಿದೆ. ಮಲಪ್ರಭಾ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ರಾಮದುರ್ಗ ತಹಶೀಲ್ದಾರ್​​ ಸೂಚನೆ ನೀಡಿದ್ದಾರೆ.

ABOUT THE AUTHOR

...view details