ಚಿಕ್ಕೋಡಿ:ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿ ಒಳ ಹರಿವು ಏರಿಕೆಯಾಗಿದೆ. ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಒಳಹರಿವು ಒಂದು ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚಿದೆ ಎಂದು ಚಿಕ್ಕೋಡಿ ತಹಶೀಲ್ದಾರ್ ಶುಭಾಸ್ ಸಂಪಗಾಂವಿ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ನಿಂದ 90,000ಕ್ಯೂಸೆಕ್ ನೀರು, ದೂಧಗಂಗಾ ನದಿಯಿಂದ 15,840 ಕ್ಯೂಸೆಕ್ ನೀರು ಹೀಗೆ ಒಟ್ಟು ಒಂದು ಲಕ್ಷ ಕ್ಯೂಸೆಕ್ಗೂ ಅಧಿಕ ನೀರು ರಾಜ್ಯದ ಕೃಷ್ಣಾ ನದಿಗೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾ - 182 ಮಿ.ಮೀ, ನವಜಾ - 324 ಮಿ.ಮೀ, ಮಹಾಬಲೇಶ್ವರ - 203 ಮಿ.ಮೀ, ವಾರಣಾ - 78 ಮಿ.ಮೀ, ಕಾಳಮ್ಮವಾಡಿ - 119 ಮಿ.ಮೀ, ರಾಧಾನಗರಿ - 104 ಮಿ.ಮೀ, ಪಾಟಗಾಂವ್ - 175 ಮಿ.ಮೀ ಮಳೆ ವರದಿಯಾಗಿದೆ. ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಾಗಿ ಮಳೆಯಾಗಿರುವ ವರದಿಯಾಗಿದೆ.