ಬೆಳಗಾವಿ:ಪ್ರಸ್ತಕ ವರ್ಷದಲ್ಲಿ ಮುಂಗಾರು ಮಳೆ ಒಂದು ತಿಂಗಳು ವಿಳಂಬವಾಗಿದೆ. ಆದರೆ, ನಿನ್ನೆ(ಗುರುವಾರ) ಮಧ್ಯಾಹ್ನದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕುಂದಾನಗರಿ ಬೆಳಗಾವಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಬೆಳಗಾವಿಯಲ್ಲಿ ಧಾರಾಕಾರ ಮಳೆ: ರೈತರ ಮೊಗದಲ್ಲಿ ಮಂದಹಾಸ - Rain related incidents Belagavi
ನಿನ್ನೆ(ಗುರುವಾರ) ಮಧ್ಯಾಹ್ನದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಬೆಳಗಾವಿಯ ರೈತರ ಮೊಗದಲ್ಲಿ ಹರ್ಷ ಮೂಡಿದೆ.
ಬೆಳಗಾವಿಯಲ್ಲಿ ಧಾರಾಕಾರ ಮಳೆ
ಜಿಲ್ಲಾದ್ಯಂತ ನಿನ್ನೆ ಮಧ್ಯಾಹ್ನದಿಂದ ನಿರಂತರ ಮಳೆ ಸುರಿದಿದ್ದು, ನಗರ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ರಸ್ತೆ ಮೇಲೆ ನೀರು ಹರಿಯುತ್ತಿರುವ ಪರಿಣಾಮ ಜನ, ವಾಹನ ಸಂಚಾರಕ್ಕೂ ಅಡೆತಡೆ ಉಂಟಾಗಿದೆ. ಇತ್ತ ಹೊಲದಲ್ಲಿ ಬಿತ್ತನೆ ಮಾಡಿ ಆಕಾಶದೆಡೆಗೆ ಮುಖ ಮಾಡಿದ್ದ ರೈತಾಪಿ ವರ್ಗಕ್ಕೆ ಮಳೆ ಹೊಸ ಭರವಸೆ ಮೂಡಿಸಿದೆ.
ಇದನ್ನೂ ಓದಿ:ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ