ಬೆಳಗಾವಿ:ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ (Heavy rains forecast in Belagavi) ಇದ್ದು, ನದಿ ಪಾತ್ರಗಳಲ್ಲಿರುವ ಜನರು ಮುಂಜಾಗೃತ ಕ್ರಮವಾಗಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತದ ಮನವಿ ಮಾಡಿದೆ.
ಇನ್ನೂ 5 ದಿನ ಭಾರಿ ಮಳೆ: ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಬೆಳಗಾವಿ ಡಿಸಿ ಸೂಚನೆ - ರಾಜ್ಯದಲ್ಲಿ ಭಾರಿ ಮಳೆ
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಇಂದಿನಿಂದ ನ.25ರ ವರೆಗೂ ಅತಿವೃಷ್ಟಿಯಾಗುವುದಾಗಿ (Heavy rains forecast in Belagavi) ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೋಶ ಮುನ್ಸೂಚನೆ ನೀಡಿದೆ. ಹೀಗಾಗಿ ನದಿ ಪಾತ್ರಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಬೆಳಗಾವಿ ಜಿಲ್ಲಾಡಳಿತ ಹೇಳಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ದಿನಾಂಕ 20.11.2021 ರಿಂದ 25.11.2021ರವರೆಗೆ ಅತಿವೃಷ್ಟಿಯಾಗುವುದಾಗಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೋಶ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ನದಿ ಪಾತ್ರಗಳಲ್ಲಿರುವ ಜನರು ತಮ್ಮ ಅಗತ್ಯ ಸಾಮಗ್ರಿಗಳು ಮತ್ತು ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದ್ದಾರೆ.
ಜನರು ಮತ್ತು ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಲ್ಲಿ ಜಿಲ್ಲಾಡಳಿತ ವತಿಯಿಂದ ಎಲ್ಲ ಅಗತ್ಯ ರೀತಿಯ ಸಹಕಾರ ನೀಡಲಾಗುವುದು. ಜಿಲ್ಲಾಡಳಿತ-ತಾಲೂಕಾಡಳಿತವು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತೆಗೆದುಕೊಳ್ಳುವ ಎಲ್ಲ ಕ್ರಮಗಳಿಗೆ ಸಾರ್ವಜನಿಕರೆಲ್ಲರೂ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.