ಕರ್ನಾಟಕ

karnataka

ETV Bharat / city

omicron: ಕರ್ನಾಟಕ - ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್

ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕು ಹರಡುವ ಭೀತಿ ಹಿನ್ನೆಲೆ ಕರ್ನಾಟಕ - ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

high alert on karnataka maharashtra border
ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್

By

Published : Jan 4, 2022, 9:19 AM IST

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ ಘೋಷಣೆ ಮಾಡಲಾಗಿದೆ.

ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಆರ್​ಟಿಪಿಸಿಆರ್​​ ನೆಗೆಟಿವ್​​ ವರದಿ ಜತೆಗೆ 2 ಡೋಸ್ ವ್ಯಾಕ್ಸಿನೇಷನ್‌ ಮಾಡಿಸಿಕೊಂಡಿರಬೇಕು. ಒಂದು ವೇಳೆ ಹಾಗೆ ಬರುವ ಪ್ರಯಾಣಿಕರನ್ನು ವಾಪಸ್ ಕಳುಹಿಸಲಾಗುತ್ತಿದೆ.

ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್​​ಪೋಸ್ಟ್​​​ನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರದಿಂದ ಕರ್ನಾಟಕ ಪ್ರವೇಶ ಮಾಡುತ್ತಿರುವ ವಾಹನಗಳನ್ನ ಕೊಗನೊಳ್ಳಿ ಚೆಕ್​​ಪೋಸ್ಟ್​​​ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.

ಜಿಲ್ಲಾಡಳಿತ ರಾಜ್ಯ ಪ್ರವೇಶಕ್ಕೆ ಆರ್​ಟಿಪಿಸಿಆರ್​​ ನೆಗೆಟಿವ್​​ ವರದಿ ಕಡ್ಡಾಯ ಮಾಡಿದೆ. ಈ ಹಿನ್ನೆಲೆ ವರದಿ ಇಲ್ಲದೇ ಮಹಾರಾಷ್ಟ್ರದಿಂದ ಆಗಮಿಸಿದ ಕರ್ನಾಟಕದ ಮಂಗಳೂರು, ಬೆಂಗಳೂರು, ಮೈಸೂರು ತೆರಳುವ ವಾಹನಳನ್ನು ವಾಪಸ್ ಮಹಾರಾಷ್ಟ್ರಕ್ಕೆ ಕಳುಹಿಸಲಾಗುತ್ತಿದೆ.

ಇದನ್ನೂ ಓದಿ:ಮಕ್ಕಳಿಗೆ ಲಸಿಕೆ ನೀಡುತ್ತಿರುವುದು ಅತ್ಯಂತ ಮಹತ್ವದ ಹೆಜ್ಜೆ: ಪ್ರಧಾನಿ ಮೋದಿ

ABOUT THE AUTHOR

...view details