ಬೆಳಗಾವಿ/ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಕೃಷ್ಣಾ ನದಿ ನೀರಿನ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ, ಕುಡಚಿ, ನಿಪ್ಪಾಣಿ, ಚಿಕ್ಕೋಡಿ ತಾಲೂಕಿನ ಮಾಂಜರಿ, ಯಡೂರು, ಕಲ್ಲೋಳ ಗ್ರಾಮದ ರೈತರಲ್ಲಿ ಆತಂಕ ಮನೆ ಮಾಡಿದೆ. ಕಳೆದೊಂದು ವಾರದಿಂದ ಮಹಾರಾಷ್ಟ್ರದ ಸತಾರ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಮತ್ತೆ ಪ್ರವಾಹ ಭೀತಿ ಎದುರಾಗಿದೆ.
ಮಹಾರಾಷ್ಟ್ರದಲ್ಲಿ ನಿರಂತರ ಮಳೆ; ಬೆಳಗಾವಿ ಜಿಲ್ಲೆಯ ಸೇತುವೆಗಳು ಜಲಾವೃತ - Koyna Dam in Maharashtra
ಮಹಾರಾಷ್ಟ್ರದ ಯಾವುದೇ ಜಲಾಶಯದಿಂದಲೂ ನೀರು ಹೊರಬಿಟ್ಟಿರುವ ಅಧಿಕೃತವಾಗಿ ಮಾಹಿತಿ ಇಲ್ಲ. ಒಂದು ವೇಳೆ ಅಲ್ಲಿನ ಕೋಯ್ನಾ ಡ್ಯಾಂನಿಂದ ನೀರು ಬಿಟ್ಟಿದ್ದೇ ಆದಲ್ಲಿ ಚಿಕ್ಕೋಡಿಯ ಜನರು ಪ್ರವಾಹ ಎದುರಿಸಲು ಸಿದ್ಧರಾಗಬೇಕಿದೆ.
ಇದೀಗ ಕೃಷ್ಣಾ ನದಿಗೆ ಸುಮಾರು 70 ಸಾವಿರ ಕ್ಯೂಸೆಕ್ನಷ್ಟು ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಯಾವುದೇ ಜಲಾಶಯದಿಂದಲೂ ನೀರು ಹೊರಬಿಟ್ಟಿರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ನೀರಿನಿಂದ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದೆ. ಒಂದು ವೇಳೆ ಮಹಾರಾಷ್ಟ್ರದ ಕೋಯ್ನಾ ಡ್ಯಾಂನಿಂದ ನೀರು ಬಿಟ್ಟಿದ್ದೇ ಆದರೆ ಚಿಕ್ಕೋಡಿಯ ಜನರು ಪ್ರವಾಹ ಎದುರಿಸಲು ಸಿದ್ಧರಾಗಬೇಕಿದೆ. ಚಿಕ್ಕೋಡಿ ತಾಲೂಕಿನ ಯಡೂರು ಕಲ್ಲೋಳ, ಮಲಿಕವಾಡ ದತ್ತವಾಡ, ಕಾರದಗಾ ಭೋಜ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿವೆ.
ಇದನ್ನೂ ಓದಿ :ಮಲೆನಾಡು ಭಾಗದಲ್ಲಿ ಹೆಚ್ಚಾದ ಮಳೆ: ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಹ ಭೀತಿ