ಚಿಕ್ಕೋಡಿ:ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಒಳ ಹರಿವಿನಲ್ಲಿ ಸ್ವಲ್ಪ ಕಡಿಮೆಯಾಗಿದ್ದು, 40,000 ಕ್ಕೂ ಅಧಿಕ ಕ್ಯೂಸೆಕ್ ನೀರು ಕೃಷ್ಣಾ ನದಿ ಒಳ ಹರಿವು ಇದೆ ಎಂದು ಚಿಕ್ಕೋಡಿ ತಹಶೀಲ್ದಾರ್ ಶುಭಾಸ ಸಂಪಗಾಂವಿ ಈಟಿವಿ ಭಾರತಗೆ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೆಜ್‌ನಿಂದ 35,625 ಕ್ಯೂಸೆಕ್ ನೀರು, ದೂಧಗಂಗಾ ನದಿಯಿಂದ 4,400 ಕ್ಯೂಸೆಕ್ ನೀರು ಹೀಗೆ ಒಟ್ಟು 40,000 ಕ್ಯೂಸೆಕ್ ಅಧಿಕ ನೀರು ರಾಜ್ಯದ ಕೃಷ್ಣಾಗೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾ-09 ಮಿ.ಮೀ, ನವಜಾ-19 ಮಿ.ಮೀ, ಮಹಾಬಲೇಶ್ವರ - 26 ಮಿ.ಮೀ, ವಾರಣಾ - 07 ಮಿ.ಮೀ, ಕಾಳಮ್ಮವಾಡಿ - 26 ಮಿ.ಮೀ, ರಾಧಾನಗರಿ - 23 ಮಿ.ಮೀ, ಪಾಟಗಾಂವ - 55 ಮಿ.ಮೀ ಮಳೆಯಾಗಿದ್ದು ವರದಿಯಾಗಿದೆ.