ಕರ್ನಾಟಕ

karnataka

ETV Bharat / city

ಬೆಳಗಾವಿ ಜಿಲ್ಲೆಗೆ ಆಕ್ಸಿಜನ್ ಹಂಚಿಕೆ ಪ್ರಮಾಣ ಹೆಚ್ಚಳ: ಸಚಿವ ಗೋವಿಂದ ಕಾರಜೋಳ

ಕೇಂದ್ರ ಸರ್ಕಾರವು ರಾಜ್ಯದಲ್ಲಿ 32 ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಲು ಮುಂದಾಗಿದ್ದು, ಅದರಲ್ಲಿ ನಾಲ್ಕು ಘಟಕಗಳನ್ನು ಬೆಳಗಾವಿ ಜಿಲ್ಲೆಯಲ್ಲಿ ಸ್ಥಾಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Govind Karjola
Govind Karjola

By

Published : May 9, 2021, 4:48 PM IST

Updated : May 9, 2021, 5:20 PM IST

ಬೆಳಗಾವಿ:ಜಿಲ್ಲೆಗೆ ಪ್ರತಿದಿನ ಪೂರೈಕೆಯಾಗುತ್ತಿದ್ದ 16 ಕೆ.ಎಲ್‌. ಆಕ್ಸಿಜನ್ ಪ್ರಮಾಣವನ್ನು ಸರ್ಕಾರ ಇದೀಗ 24 ಕೆ.ಎಲ್​ಗೆ ಹೆಚ್ಚಿಳ ಮಾಡಲಾಗಿದೆ ಎಂದು ಉಪ ಮುಖ್ಯಂತ್ರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮದ ಹೇಳಿಕೆ ನೀಡಿರುವ ಅವರು, ಆಕ್ಸಿಜನ್ ಪ್ರಮಾಣ ಹೆಚ್ಚಳದಿಂದ ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗಲಿದೆ. ಅದೇ ರೀತಿ ಜಿಲ್ಲೆಯ ಜನಸಂಖ್ಯೆ ಹಾಗೂ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಗೆ ಅನುಸಾರ ರೆಮ್​ಡಿಸಿವಿರ್ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಒದಗಿಸಬೇಕು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಮನವಿ ಮಾಡಿಕೊಳ್ಳಲಾಗಿದ್ದು, ಮೂರು ದಿನಗಳಲ್ಲಿ ರೆಮ್​ಡಿಸಿವಿರ್ ಕೂಡ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆಯಾಗಲಿದೆ ಎಂದರು.

ಬೆಳಗಾವಿ ಜಿಲ್ಲೆಗೆ ಆಕ್ಸಿಜನ್ ಹಂಚಿಕೆ ಪ್ರಮಾಣ ಹೆಚ್ಚಳ: ಸಚಿವ ಗೋವಿಂದ ಕಾರಜೋಳ

ಜಿಲ್ಲೆಗೆ ನಾಲ್ಕು ಆಕ್ಸಿಜನ್ ಘಟಕ‌ ಸ್ಥಾಪನೆಗೆ ಮನವಿ:

ಭಾರತ ಸರ್ಕಾರವು ರಾಜ್ಯದಲ್ಲಿ 32 ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಲು ಮುಂದಾಗಿದ್ದು, ಅದರಲ್ಲಿ ನಾಲ್ಕು ಘಟಕಗಳನ್ನು ಬೆಳಗಾವಿ ಜಿಲ್ಲೆಯಲ್ಲಿ ಸ್ಥಾಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಮಾಡಿದ್ದೇನೆ. ನಾಲ್ಕು ಘಟಕಗಳನ್ನು ಬೆಳಗಾವಿಗೆ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. ಇತ್ತೀಚೆಗೆ ಅಪಘಾತಕ್ಕೀಡಾಗಿರುವ ಆಕ್ಸಿಜನ್ ಟ್ಯಾಂಕರ್ ಕೂಡ ಕೆಲವೇ ದಿನಗಳಲ್ಲಿ ದುರಸ್ತಿಗೊಂಡು ಆಕ್ಸಿಜನ್ ಸಾಗಿಸಲು ಸಿದ್ಧಗೊಳ್ಳಲಿದೆ ಎಂದು ಸಚಿವರು ಹೇಳಿದರು.

ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಮನವಿ:

ಕೋವಿಡ್-19 ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಪ್ರಕಟಿಸಿರುವ 14 ದಿನಗಳ ಹೊಸ ಮಾರ್ಗಸೂಚಿಯನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಸಾರ್ವಜನಿಕರು ಹಾಗೂ ವಾಹನಗಳ ಅನಗತ್ಯ ಓಡಾಟವನ್ನು ತಡೆಗಟ್ಟಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ.‌ ಸಾರ್ವಜನಿಕರು ಕೂಡ ಇದಕ್ಕೆ ಕೈಜೋಡಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ಕರೆ ನೀಡಿದ್ದಾರೆ.

Last Updated : May 9, 2021, 5:20 PM IST

ABOUT THE AUTHOR

...view details