ಬೆಳಗಾವಿ:ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕಾರಣಿಗಳು ಹಾಗು ಅವರ ಆಪ್ತರ ಮನೆಗಳ ಮೇಲೆ ಐಟಿ ದಾಳಿಯ ಬಿಸಿಯೂ ಹೆಚ್ಚುತ್ತಿದೆ.ರಾಜ್ಯ ರಾಜಕಾರಣದಲ್ಲಿ ಸಕ್ರೀಯವಾಗಿರುವ ಜಾರಕಿಹೊಳಿ ಕುಟುಂಬದ ನಾಲ್ವರು ಸಹೋದರರ ಅತ್ಯಾಪ್ತನ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು.
ಜಾರಕಿಹೊಳಿ ಸಹೋದರರ ಆಪ್ತನ ಮನೆ ಮೇಲೆ ಐಟಿ ದಾಳಿ - Jarakiholi
ಗೋಕಾಕ್ ತಾಲೂಕಿನ ಘಟಪ್ರಭಾದಲ್ಲಿರುವ ಉದ್ಯಮಿ ಜಯಶೀಲ ಶೆಟ್ಟಿ ಮನೆ ಮೇಲೆ ಗೋವಾದ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಮುಖ ದಾಖಲೆಗಳನ್ನು ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಐಟಿ ದಾಳಿಗೊಳಗಾದ ಜಾರಕಿಹೊಳಿ ಆಪ್ತರ ಮನೆ
ಗೋಕಾಕ್ ತಾಲೂಕಿನ ಘಟಪ್ರಭಾದಲ್ಲಿರುವ ಉದ್ಯಮಿ ಜಯಶೀಲ ಶೆಟ್ಟಿ ಮನೆ ಮೇಲೆ ಗೋವಾದ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಪ್ರಮುಖ ದಾಖಲೆಗಳನ್ನು ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ರಾತ್ರಿಯಿಡಿ ದಾಖಲೆಗಳ ಪರಿಶೀಲನೆ ನಡೆಯುವ ಸಾಧ್ಯತೆ ಇದೆ.
ಬೆಳಗ್ಗೆ ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ಆಪ್ತನ ಮನೆ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಸಂಜೆ ಜಾರಕಿಹೊಳಿ ಸಹೋದರರ ಆಪ್ತನ ಮನೆ ಮೇಲೆ ದಾಳಿ ನಡೆಸಿದ್ದಾರೆ.