ಬೆಳಗಾವಿ: ಬೆಳಗಾವಿ ರಾಜಕಾರಣಿಗಳ ಮಧ್ಯೆ ಭಿನ್ನಮತ ಇರುವುದು ನಿಜ. ಅದರಲ್ಲಿ ಯಾವ ಮುಚ್ಚುಮರೆಯೂ ಇಲ್ಲ. ಆ ಬಗ್ಗೆ ನಾವು ಒಟ್ಟಿಗೆ ಕೂತು ಮಾತನಾಡಿದ್ದೇವೆ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ನಿಜ, ಸರಿಪಡಿಸುತ್ತೇವೆ: ಬಿಎಸ್‌ವೈ - ಜಿಲ್ಲಾ ಕೋರ್ ಕಮೀಟಿ ಸಭೆ
ಸಚಿವ ಈಶ್ವರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವು, ಬೆಳಗಾವಿಯಲ್ಲಿ ಬಿಜೆಪಿಯಲ್ಲಿರುವ ಭಿನ್ನಮತದ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.

ಜಿಲ್ಲಾ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಒಳಜಗಳ ಇದ್ದರೂ ಅದನ್ನು ಮರೆತು ಬೆಳಗಾವಿಯ ಎಲ್ಲಾ 18 ಸ್ಥಾನಗಳನ್ನು ಗೆಲ್ಲುವಲ್ಲಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದೇವೆ. ಎಲ್ಲರೂ ಅವರವರ ಅಭಿಪ್ರಾಯಗಳನ್ನೂ ವ್ಯಕ್ತಪಡಿಸಿದ್ದಾರೆ. ಭಿನ್ನಾಭಿಪ್ರಾಯಕ್ಕೆ ಅವಕಾಶ ಕೊಡದೇ ಕೆಲಸ ಮಾಡುವಂತೆ ಹೇಳಿದ್ದೇನೆ ಎಂದರು.
'ಗುತ್ತಿಗೆದಾರನ ಆತ್ಮಹತ್ಯೆ ಬಗ್ಗೆ ಗೊತ್ತಿಲ್ಲ':ಸಚಿವ ಕೆ.ಎಸ್.ಈಶ್ವರಪ್ಪ ಹೆಸರು ಬರೆದಿಟ್ಟು ಬೆಳಗಾವಿ ಮೂಲದ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ಕುರಿತು ಮಾತನಾಡಿ, ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ನನಗಿಲ್ಲ, ಕ್ಷಮಿಸಿ, ಎಂದಷ್ಟೇ ಬಿಎಸ್‌ವೈ ತಿಳಿಸಿದರು.