ಬೆಳಗಾವಿ: ಮುಂಬರುವ ಮಳೆಗಾಲದ ಅಧಿವೇಶನವನ್ನು ಬೆಳಗಾವಿ ಸುರ್ವಣಸೌಧದಲ್ಲಿ ಮಾಡುವ ಮೂಲಕ ಉತ್ತರ ಕರ್ನಾಟದ ಆಡಳಿತ ಶಕ್ತಿ ಕೇಂದ್ರವನ್ನಾಗಿ ಮಾಡಬೇಕು. ಇಲ್ಲವಾದರೆ, ಪ್ರತ್ಯೇಕ ರಾಜ್ಯದ ಹೋರಾಟ ಅನಿವಾರ್ಯವಾಗಲಿದೆ ಎಂದು ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಜನರ ಬೇಕು, ಬೇಡಗಳಿಗೆ ಧ್ವನಿಯಾಗಬೇಕು. ಇಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಬೇಕೆಂಬ ಸದುದ್ದೇಶದಿಂದ ನಿರ್ಮಿಸಿದ್ದ ಬೆಳಗಾವಿ ಸುವರ್ಣಸೌಧದಲ್ಲಿ ಕಳೆದ ಮೂರು ವರ್ಷಗಳಿಂದ ಅಧಿವೇಶನ ಆಗಿಲ್ಲ. ಎಲ್ಲಿಯವರೆಗೆ ಸುವರ್ಣಸೌಧದಲ್ಲಿ ಅಧಿವೇಶನ ನಡೆಸುವುದಿಲ್ಲವೋ, ಅಲ್ಲಿಯವರೆಗೂ ಆಡಳಿತ ವಿಕೇಂದ್ರಿಕರಣ ಆಗೋದಿಲ್ಲ.
ಮುಂಬರುವ ಮಳೆಗಾಲದ ಅಧಿವೇಶನವನ್ನು ಎರಡು ತಿಂಗಳುಗಳ ಕಾಲ ಬೆಳಗಾವಿ ಸುವರ್ಣಸೌಧದಲ್ಲಿ ನಡೆಸುವ ಮೂಲಕ ಉತ್ತರ ಕರ್ನಾಟಕದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದ ಪ್ರದೇಶಗಳ ಬಗ್ಗೆ ಚರ್ಚೆ ನಡೆಸಿ, ಈ ಭಾಗದ ಆಶೋತ್ತರಗಳಿಗೆ ಸ್ಪಂದಿಸಬೇಕು.