ಕರ್ನಾಟಕ

karnataka

ETV Bharat / city

ಬೆಳಗಾವಿಯಲ್ಲಿ ಜೂನ್ 19-21ರ ವರೆಗೆ ವೀಕೆಂಡ್ ಲಾಕ್​​ಡೌನ್​: ಡಿಸಿ ಆದೇಶ - ಗ್ರಾಮ ಪಂಚಾಯತಿ ಪಿಡಿಓ ಹಾಗೂ ಗ್ರಾಮಲೆಕ್ಕಿಗ

ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧಿ ಪೂರೈಕೆ ಮತ್ತು ಖರೀದಿಗೆ ಹಾಗೂ ಆನ್‌ಲೈನ್ ಫುಡ್ ಸರ್ವಿಸಸ್‌ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ, ಸರ್ಕಾರಿ ಅಧಿಕಾರಿಗಳಿಗೆ ಸರ್ಕಾರಿ ಸಭೆಗೆ ಹಾಜರಾಗಲು ಮಾತ್ರ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

belagavi district
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

By

Published : Jun 16, 2021, 3:44 PM IST

ಬೆಳಗಾವಿ:ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಜೂನ್ 19ರ ಬೆಳಗ್ಗೆ 06.00 ಗಂಟೆಯಿಂದ ಜೂನ್ 21ರ ಬೆಳಗ್ಗೆ 06.00 ಗಂಟೆಯವರೆಗೆ ಸಂಪೂರ್ಣ ಲಾಕ್​​​ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಕೋವಿಡ್-19 ಹರಡುವುದನ್ನು ತಡೆಗಟ್ಟಲು ಜೂನ್ 21ರ ಬೆಳಗ್ಗೆ 06.00 ಗಂಟೆಯವರೆಗೆ ಸಾರ್ವಜನಿಕರು ಅನಾವಶ್ಯಕವಾಗಿ ಓಡಾಡುವುದನ್ನು ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿ ನಿಷೇಧಿಸಿ ಆದೇಶಿಸಲಾಗಿತ್ತು.

ಓದಿ: ಎಸ್ಎಸ್ಎಲ್​​ಸಿ ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅವಕಾಶ:

ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧಿ ಪೂರೈಕೆ ಮತ್ತು ಖರೀದಿಗೆ ಹಾಗೂ ಆನ್‌ಲೈನ್ ಫುಡ್ ಸರ್ವಿಸಸ್‌ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ, ಸರ್ಕಾರಿ ಅಧಿಕಾರಿಗಳಿಗೆ ಸರ್ಕಾರಿ ಸಭೆಗೆ ಹಾಜರಾಗಲು ಮಾತ್ರ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ರೈತ ಸಂಬಂಧಿ ಚಟುವಟಿಕೆಗಳಿಗೆ ಅವಕಾಶ:

ಲಾಕ್​​​ಡೌನ್ ಘೋಷಿಸಿರುವ ದಿನಗಳಂದು ಸಾರ್ವಜನಿಕ ವಿತರಣಾ ಪದ್ದತಿಯಡಿಯಲ್ಲಿ ಬರುವ ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 06.00 ಗಂಟೆಯಿಂದ ಬೆಳಗ್ಗೆ 10.00 ಗಂಟೆಯವರೆಗೆ ಮಾತ್ರ ಕಾರ್ಯ ನಿರ್ವಹಿಸಬೇಕು. ಅದೇ ರೀತಿ, ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳು ಬೆಳಗ್ಗೆ 06.00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆಯವರೆಗೆ ಅಂಗಡಿಗಳನ್ನು ತೆರೆದು ಬೀಜ ಹಾಗೂ ರಸಗೊಬ್ಬರಗಳನ್ನು ವಿತರಿಸಲು ಅವಕಾಶವಿರುತ್ತದೆ. ಪ್ರತಿ ಗ್ರಾಮದಿಂದ 5 ಜನರಿಗೆ ಮಾತ್ರ ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳಿಗೆ ಹೋಗಲು ಅವಕಾಶವಿರುತ್ತದೆ.

ಬೆಳಗಾವಿ ನಗರದಲ್ಲಿ ಬೀಜ, ರಸಗೊಬ್ಬರ ಹಾಗೂ ಇತರೆ ಪರಿಕರಗಳ ಮಾರಾಟ ಮಳಿಗೆಗಳು ಲಾಕ್​​ಡೌನ್ ದಿನಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯಲು ಅವಕಾಶವಿದ್ದು, ಅಲ್ಲಿ ತೆರಳುವ ರೈತರು ಗ್ರಾಮ ಪಂಚಾಯತಿ ಪಿಡಿಓ ಹಾಗೂ ಗ್ರಾಮಲೆಕ್ಕಿಗರ ಅನುಮತಿ ಪಡೆಯಬೇಕು. ಅಲ್ಲದೇ, ಆದೇಶದಲ್ಲಿ ಸೂಚಿಸಿರುವ ದಿನಗಳಂದು ಈಗಾಗಲೇ ಪೂರ್ವಾನುಮತಿ ಪಡೆದುಕೊಂಡು ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಸಂಪೂರ್ಣ ಲಾಕ್​​ಡೌನ್ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾಗಿರುವ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details