ಚಿಕ್ಕೋಡಿ: ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ನಿನ್ನೆ ರಾತ್ರಿ ಸುಮಾರು 11:30ಕ್ಕೆ ಚುನಾವಣಾ ಪ್ರಚಾರ ಮುಗಿಸಿಕೊಂಡು ನಾನು ಹಾಗೂ ಮುಖಂಡ ಭರಮಾ ಧೂಪದಾಳ ಯಮಕನಮರಡಿಗೆ ವಾಪಸ್ ಆಗಿದ್ದೆವು. ಗ್ರಾಮದ ಜೈನ್ ಬಸ್ತಿ ಬಳಿಯ ಕಟ್ಟೆಯ ಮೇಲೆ ಕುಳಿತು ನಾಳೆಯ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡುತ್ತಿರುವ ವೇಳೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪ್ರತ್ಯಕ್ಷದರ್ಶಿ ಕಿರಣ ರಜಪೂತ ಹೇಳಿದರು.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಯಮಕನಮರಡಿ ಪಟ್ಟಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಸುಕುಧಾರಿ ದುಷ್ಕರ್ಮಿಯೋರ್ವ ಬಂದು ಏಕಾಏಕಿ ಗುಂಡಿನ ದಾಳಿ ಮಾಡಿದ. ನಮಗೂ ಕೂಡ ಈ ಘಟನೆ ವೈಯಕ್ತಿಕವಾಗಿ ಬಹಳ ಹೆದರಿಕೆ ಉಂಟು ಮಾಡಿದೆ. ಪೊಲೀಸ್ ಇಲಾಖೆ ಇದರ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸಿ, ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಹೇಳಿದರು.