ಕರ್ನಾಟಕ

karnataka

ETV Bharat / city

ಕಿತ್ತೂರು ರಾಣಿ ಚೆನ್ನಮ್ಮ ಸೈನಿಕ ಶಾಲೆಯ 12 ಬಾಲಕಿಯರಿಗೆ ಕೋವಿಡ್ ಸೋಂಕು ದೃಢ! - ಬೆಳಗಾವಿ ವಿದ್ಯಾರ್ಥಿಗಳಿಗೆ ಕೊರೊನಾ

ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯ 12 ವಿದ್ಯಾರ್ಥಿನಿಯರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಕಿತ್ತೂರು ಸೈನಿಕ ಶಾಲೆಯ 12 ಬಾಲಕಿಯರಿಗೆ ಕೋವಿಡ್ ಸೋಂಕು
ಕಿತ್ತೂರು ಸೈನಿಕ ಶಾಲೆಯ 12 ಬಾಲಕಿಯರಿಗೆ ಕೋವಿಡ್ ಸೋಂಕು

By

Published : Jan 8, 2022, 8:19 PM IST

ಬೆಳಗಾವಿ: ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ. 15 ರಿಂದ 18 ವರ್ಷದ 12 ವಿದ್ಯಾರ್ಥಿನಿಯರಲ್ಲಿ ಸೋಂಕು ದೃಢಪಟ್ಟಿದೆ.

ಕಿತ್ತೂರು ರಾಣಿ ಚೆನ್ನಮ್ಮ ಸೈನಿಕ ವಸತಿ ಶಾಲೆಯ ಹಲವು ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ 102 ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ರ‌್ಯಾಪಿಡ್ ಟೆಸ್ಟ್ ಮಾಡಿದ್ದರು. ಈ ಪೈಕಿ 12 ವಿದ್ಯಾರ್ಥಿನಿಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ ಸೀಲ್‌ಡೌನ್‌ಗೆ ತಾಲೂಕಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ‌. ಸೋಂಕಿತ ವಿದ್ಯಾರ್ಥಿನಿಯರಿಗೆ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ಜಿಲ್ಲೆಯಲ್ಲಿಂದು 70 ಪ್ರಕರಣಗಳು ದೃಢಪಟ್ಟಿವೆ.

(ಇದನ್ನೂ ಓದಿ: ಏನ್‌ ಗಟ್ಟಿರೀ ಈಕೆ.. ವಯಸ್ಸು 81 ಆದ್ರೂ ಕೆಲಸಕ್ಕೆಂದು 22 ಕಿ.ಮೀ ಸೈಕಲ್​ ತುಳಿಯುವ ಅಜ್ಜಿ!)

ABOUT THE AUTHOR

...view details