ಬೆಳಗಾವಿ :ಅ.23 ಹಾಗೂ 24 ರಂದು ರಾಣಿ 'ಚನ್ನಮ್ಮನ ಕಿತ್ತೂರು ಉತ್ಸವ' ಜರುಗುತ್ತಿದೆ. ಅದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರದಿಂದ ನಡೆಸುವ ಕಿತ್ತೂರು ಉತ್ಸವಕ್ಕೆ 25 ವರ್ಷ ತುಂಬಿದ ಸ್ಮರಣಾರ್ಥ ಬೆಳ್ಳಿ ಹಬ್ಬವನ್ನು ಆಚರಿಸಲಾಗುತ್ತಿದೆ.
ಇತಿಹಾಸ ಪ್ರಸಿದ್ಧ ರಾಣಿ 'ಚನ್ನಮ್ಮನ ಕಿತ್ತೂರು ಉತ್ಸವ' ಬೆಳಗಾವಿ ಜಿಲ್ಲೆಯ ಕಿತ್ತೂರು ಕೋಟೆ ಆವರಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಆಶ್ರಯದಲ್ಲಿ ಎರಡು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ 7ಕ್ಕೆಈ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಆಗಮಿಸಲಿರುವ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ "ಕಿತ್ತೂರು ಸಂಸ್ಥಾನದ ಇತಿಹಾಸ ಮತ್ತು ಸಂಸ್ಕೃತಿ"ಯ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.
ಕಾಕತಿಯಲ್ಲಿ ರಾಣಿ ಚನ್ನಮ್ಮ ಮೂರ್ತಿಗೆ ಪೂಜೆ :ಅ.23ರಂದು ರಾಣಿ ಚನ್ನಮ್ಮನ ತವರೂರು ಕಾಕತಿಯಲ್ಲಿ ಬೆಳಗ್ಗೆ 8:30ಕ್ಕೆ ಮೂರ್ತಿ ಪೂಜೆ ನೆರವೇರಲಿದೆ. ಕಾಕತಿಯ ಶಿವಪೂಜಾಮಠದ ಶ್ರೀ ರಾಚಯ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ.
ಇತಿಹಾಸ ಪ್ರಸಿದ್ಧ ರಾಣಿ 'ಚನ್ನಮ್ಮನ ಕಿತ್ತೂರು ಉತ್ಸವ' ಉದ್ಘಾಟನಾ ಕಾರ್ಯಕ್ರಮಗಳು :
ಅ.23ರಂದು ಕಿತ್ತೂರಿನ ಗಡಾದಮರಡಿಯಲ್ಲಿ ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿ ಹಾಗೂ ಕಿತ್ತೂರು ಉತ್ಸವ ಸಮಿತಿಯ ಅಧ್ಯಕ್ಷ ಎಂ ಜಿ ಹಿರೇಮಠ ಉದ್ಘಾಟನಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಗ್ಗೆ 10ಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮ ವೃತ್ತದ ಬಳಿ ಚನ್ನಮ್ಮ ವಿಜಯ ಜ್ಯೋತಿ ಬರಮಾಡಿಕೊಳ್ಳಲಾಗುವುದು. ಕಿತ್ತೂರು ಸಂಸ್ಥಾನದ ಧ್ವಜಾರೋಹಣವನ್ನು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನೆರವೇರಿಸಲಿದ್ದಾರೆ.
ಇತಿಹಾಸ ಪ್ರಸಿದ್ಧ ರಾಣಿ 'ಚನ್ನಮ್ಮನ ಕಿತ್ತೂರು ಉತ್ಸವ' ಬಳಿಕ ಬೆಳಗ್ಗೆ 10:30ಕ್ಕೆ ಜಾನಪದ ಕಲಾವಾಹಿನಿ ಉದ್ಘಾಟನೆ ಕಾರ್ಯಕ್ರಮವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನೀಲ್‌ಕುಮಾರ್ ಉದ್ಘಾಟಿಸುವರು. ಬೆಳಗ್ಗೆ 11ಗಂಟೆಗೆ ಕಿತ್ತೂರಿನ ಕೆಎನ್‌ವಿ ಪ್ರೌಢ ಶಾಲೆಯ ಆವರಣದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರಗೇಶ್ ನಿರಾಣಿ ಅವರು ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ.
ವಿವಿಧ ಕ್ರೀಡಾ ಕಾರ್ಯಕ್ರಮಗಳ ಆಯೋಜನೆ :ಅ. 24 (ರವಿವಾರ) ಬೆಳಿಗ್ಗೆ 7 ಗಂಟೆಗೆ ಚನ್ನಮ್ಮ ವೃತ್ತದ ಬಳಿ ಪುರುಷ ಹಾಗೂ ಮಹಿಳೆಯರಿಗಾಗಿ ಸೈಕ್ಲಿಂಗ್ ಆಯೋಜಿಸಲಾಗಿದೆ. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಉಳವಪ್ಪಾ ಉಳ್ಳಿಗಡ್ಡಿ ಅವರು ಉದ್ಘಾಟಿಸಲಿದ್ದಾರೆ. ಬಳಕ ಬೆಳಗ್ಗೆ 11 ಗಂಟೆಗೆ ಪುರುಷ ಹಾಗು ಮಹಿಳೆಯರಿಗಾಗಿ ಮುಕ್ತ ವಾಲಿಬಾಲ್ ಸ್ಪರ್ಧೆಯನ್ನು ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ ಮೈದಾನದಲ್ಲಿ ಆಯೋಜಿಸಲಾಗಿದೆ.
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಚಿನ್ನಪ್ಪ ಮುತ್ನಾಳ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ ಮೈದಾನದಲ್ಲಿ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಇತಿಹಾಸ ಪ್ರಸಿದ್ಧ ರಾಣಿ 'ಚನ್ನಮ್ಮನ ಕಿತ್ತೂರು ಉತ್ಸವ' ಸಮಾರೋಪ ಸಮಾರಂಭ :ಅ.24 ರಂದು ಸಂಜೆ 7ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ. ನಿಚ್ಚಣಕಿಯ ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ ಬೈಲೂರು ನಿಷ್ಕಲ ಮಂಟಪದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕರ್ನಾಟಕ ವಿಧಾನ ಪರಿಷತ್ನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮತ್ತು ಕರ್ನಾಟಕ ವಿಧಾನ ಸಭೆಯ ಉಪಸಭಾಧ್ಯಕ್ಷ ವಿಶ್ವನಾಥ ಮಾಮನಿ ಉಪಸ್ಥಿತರಿರುವರು. ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅಧ್ಯಕ್ಷತೆ ವಹಿಸಲಿದ್ದಾರೆ.
ಇತಿಹಾಸ ಪ್ರಸಿದ್ಧ ರಾಣಿ 'ಚನ್ನಮ್ಮನ ಕಿತ್ತೂರು ಉತ್ಸವ' ಬಳಿಕ, ರಾತ್ರಿ 9:15ರಿಂದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಗು ತಂಡದವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ 10ಸಾವಿರಕ್ಕೂ ಅಧಿಕ ಆಸನದ ವ್ಯವಸ್ಥೆ ಒದಗಿಸಲಾಗಿದೆ. ಅಲ್ಲದೇ ಉತ್ಸವಕ್ಕೆ ಆಗಮಿಸುವ ಎಲ್ಲರಿಗೂ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ.