ಚಿಕ್ಕೋಡಿ (ಬೆಳಗಾವಿ):ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಹಾಗೂ ಚಿಕ್ಕೋಡಿ ಉಪವಿಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಇದರಿಂದ ಕೃಷ್ಣಾ ನದಿ ಒಳಹರಿವು ಸ್ವಲ್ಪಮಟ್ಟಿಗೆ ಇಳಿಕೆಯಾಗಿದ್ದು, ನದಿ ತೀರದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಕಳೆದವಾರ ಅತಿಯಾದ ಮಳೆ ಹಾಗೂ ಕೊಯ್ನಾ ಜಲಾಶಯದಿಂದ ನೀರು ಹೊರಬಿಟ್ಟ ಪರಿಣಾಮ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿ ತೀರದಲ್ಲಿ ಭಾರಿ ಪ್ರಮಾಣದ ಪ್ರವಾಹ ಉಂಟಾಗಿ ಅವಾಂತರ ಸೃಷ್ಟಿಯಾಗಿತ್ತು. ಸದ್ಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ನಿನ್ನೆ (ಮಂಗಳವಾರ) ರಾತ್ರಿಯಿಂದ ನೀರು ಹರಿವಿನ ಪ್ರಮಾಣ ಕಡಿಮೆಯಾಗಿದೆ.