ಚಿಕ್ಕೋಡಿ : ಕೋಯ್ನಾ ಜಲಾಶಯದಿಂದ 2000 ಕ್ಯೂಸೆಕ್ಗಿಂತ ಹೆಚ್ಚಿನ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಿರುವುದರಿಂದ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಪರಿಣಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ನದಿ ದಡದ ಜನರನ್ನು ಸ್ಥಳಾಂತರ ಮಾಡುವಂತೆ ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿದ್ದಾರೆ.
ಕೃಷ್ಣೆಯಲ್ಲಿ ಹೆಚ್ಚಿದ ನೀರು: ನದಿ ದಡದ ಜನರ ಸ್ಥಳಾಂತರ
ಕೋಯ್ನಾ ಜಲಾಶಯ ಶೇ. 75ರಷ್ಟು ಭರ್ತಿಯಾಗಿದೆ. ಈ ಹಿನ್ನೆಲೆ ಕೃಷ್ಣಾ ನದಿಗೆ ನೀರು ಬಿಡಲಾಗಿದ್ದು, ನದಿ ತೀರದ ಗ್ರಾಮಗಳಲ್ಲಿ ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿದ್ದಾರೆ.
ನದಿ ದಡದ ಜನರ ಸ್ಥಳಾಂತರ
ಕೋಯ್ನಾ ಜಲಾಶಯ ಶೇ. 75ರಷ್ಟು ಭರ್ತಿಯಾಗಿದೆ. ಈ ಹಿನ್ನೆಲೆ ಕೃಷ್ಣಾ ನದಿಗೆ ನೀರು ಬಿಡಲಾಗಿದ್ದು, ನದಿ ತೀರದ ಗ್ರಾಮಗಳಲ್ಲಿ ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿದ್ದಾರೆ. ಕೃಷ್ಣಾ ನದಿಗೆ ಸುಮಾರು 2 ಲಕ್ಷ ಕ್ಯೂಸೆಕ್ಗಿಂತ ಹೆಚ್ಚಿನ ನೀರು ಮಹಾರಾಷ್ಟ್ರದಿಂದ ಹರಿದು ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ ಚಿಕ್ಕೋಡಿ ಉಪ ತಹಶೀಲ್ದಾರ್ ಸದಲಗಾ ಅವರ ನೇತೃತ್ವದಲ್ಲಿ ಜನರನ್ನು ಸುರಕ್ಷಿತವಾಗಿ ಸ್ಥಳಂತರಿಸಲಾಗುತ್ತಿದೆ.