ಬೆಳಗಾವಿ: ತಾಲೂಕಿನ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಶ್ರಮಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಪೀರನವಾಡಿ ಗ್ರಾಮಸ್ಥರ ವತಿಯಿಂದ ಸನ್ಮಾನಿಸಲಾಯಿತು.
ರಾಯಣ್ಣ ಪ್ರತಿಮೆ ಸ್ಥಾಪನೆ: ರಮೇಶ್ ಜಾರಕಿಹೊಳಿಗೆ ಕೃತಜ್ಞತೆ ಸಲ್ಲಿಸಿದ ಕುರುಬರ ಸಂಘ
ಬೆಳಗಾವಿ ತಾಲೂಕಿನ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಶ್ರಮಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಪೀರನವಾಡಿ ಗ್ರಾಮಸ್ಥರ ವತಿಯಿಂದ ಸನ್ಮಾನಿಸಲಾಯಿತು.
ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಕಗ್ಗಂಟಾಗಿತ್ತು. ಈ ವಿವಾದವನ್ನು ಸುಲಭ ಹಾಗೂ ಸರಳವಾಗಿ ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸಹಕಾರ ನೀಡಿದ್ದಕ್ಕಾಗಿ ಅವರನ್ನು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಡಾ. ರಾಜೇಂದ್ರ, ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿವಾದ ಸರಳವಾಗಿ ಬಗೆಹರಿದಿದೆ. ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ರಮೇಶ್ ಜಾರಕಿಹೊಳಿ, ಪ್ರತಿಮೆ ಎಲ್ಲಿ ಸ್ಥಾಪಿಸಬೇಕೆಂಬುದನ್ನು ಶೀಘ್ರವೇ ಮಾಡಿ ತೋರಿಸುತ್ತೇವೆ ಎಂದಿದ್ದರು. ಅದರಂತೆ ದಿಟ್ಟ ನಿರ್ಧಾರ ಕೈಗೊಂಡು ಪ್ರತಿಮೆಯನ್ನು ಸ್ಥಾಪಿಸಿದ್ದಾರೆ. ಇದಕ್ಕೆ ಕಾರಣರಾದ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.