ಕರ್ನಾಟಕ

karnataka

By

Published : Mar 21, 2020, 5:31 PM IST

ETV Bharat / city

ಬೆಳಗಾವಿಯಲ್ಲಿ ಕೊರೊನಾ ಪರೀಕ್ಷೆಗೆ ಶೀಘ್ರದಲ್ಲೇ ಲ್ಯಾಬ್: ಸಚಿವ ಶ್ರೀರಾಮುಲು

ಕೋವಿಡ್-19 ಪರೀಕ್ಷೆಗೆ ಪ್ರಯೋಗಾಲಯವನ್ನ ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

Lab soon to control covid 19 in the district: B. Sriramulu
ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಶೀಘ್ರದಲ್ಲೇ ಲ್ಯಾಬ್: ಬಿ.ಶ್ರೀರಾಮುಲು

ಬೆಳಗಾವಿ:ಕೋವಿಡ್-19 ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಿಲ್ಲೆಗೆ 20 ಕೋಟಿ ರೂ. ಅನುದಾನ ನೀಡಿದ್ದು, ಪ್ರಯೋಗಾಲಯವನ್ನ ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆಗೆ ಶೀಘ್ರದಲ್ಲೇ ಲ್ಯಾಬ್: ಬಿ.ಶ್ರೀರಾಮುಲು

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಸಿದ್ಧತೆಗಳ ಕುರಿತು ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬರುವ ಎರಡು ವಾರ ಮಹತ್ವದ ಅವಧಿಯಾಗಿದೆ. ಅಧಿಕಾರಿಗಳು ವೈರಸ್ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಂತರ್​ ರಾಜ್ಯ ಜನ ಸಂಚಾರದ ಮೇಲೆ ನಿಗಾ ವಹಿಸಲು ರಾಜ್ಯ ಪ್ರವೇಶಿಸುವ ಸ್ಥಳಗಳಲ್ಲಿ ಚುನಾವಣಾ ಚೆಕ್​ ಪೋಸ್ಟ್ ಮಾದರಿಯಲ್ಲಿಯೇ ನಿಗಾ ವಹಿಸಲು ಹಾಗೂ ಆರೋಗ್ಯ ತಪಾಸಣಾ ತಂಡ ನಿಯೋಜಿಸಬೇಕು ಎಂದು ಸಲಹೆ ನೀಡಿದರು. ಅಲ್ಲದೆ ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ತೀವ್ರವಾಗಿ ಹರಡುತ್ತಿರುವುದರಿಂದ ಜನ ಸಂಚಾರವನ್ನ ಸಂಪೂರ್ಣವಾಗಿ ಬಂದ್ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಬೆಳಗಾವಿಯಲ್ಲಿ ಯಾವುದೇ ಪ್ರಕರಣ ಕಂಡುಬಂದಿಲ್ಲ. ಹೀಗಾಗಿ ವೈದ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಅಭಿನಂದನೆಗಳು. ಇನ್ನು ಬರುವ ದಿನಗಳಲ್ಲೂ ವೈರಾಣು ಹರಡುವಿಕೆ ತಡೆಗಟ್ಟಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಇನ್ನಷ್ಟು ಎಚ್ಚರಿಕೆ ವಹಿಸಬೇಕು ಎಂದರು.

ABOUT THE AUTHOR

...view details