ಕರ್ನಾಟಕ

karnataka

ETV Bharat / city

ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ: ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ ‌ಹೆಬ್ಬಾಳ್ಕರ್, ಲಕ್ಷ್ಮಣ ಸವದಿ - Laxman Savadi did not give reaction about ramesh jarkiholi cd case

ಬೆಂಗಳೂರಿನಲ್ಲಿ ನಡೆದ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಒಂದೇ ವಿಮಾನದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಲಕ್ಷ್ಮೀ ‌ಹೆಬ್ಬಾಳ್ಕರ್, ಲಕ್ಷ್ಮಣ ಸವದಿ
ಲಕ್ಷ್ಮೀ ‌ಹೆಬ್ಬಾಳ್ಕರ್, ಲಕ್ಷ್ಮಣ ಸವದಿ

By

Published : Mar 11, 2021, 12:49 PM IST

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ಹಾಗೂ‌ ಡಿಸಿಎಂ ಲಕ್ಷ್ಮಣ ಸವದಿ ಯಾವುದೇ ಪ್ರತಿಕ್ರಿಯೆ ನೀಡಲು‌ ನಿರಾಕರಿಸಿದರು.

ಜಾರಕಿಹೊಳಿ‌ ಸಿಡಿ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಲು ಹಿಂದೇಟು

ಬೆಂಗಳೂರಿನಲ್ಲಿ ನಡೆದ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಒಂದೇ ವಿಮಾನದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಈ ವೇಳೆ ಮಾಧ್ಯಮದವರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಎಲ್ಲರಿಗೂ ಶಿವರಾತ್ರಿ ಹಬ್ಬದ ಶುಭಾಶಯಗಳು ಎಂದು ಮಾತ್ರ ತಿಳಿಸಿದರು.

ಇತ್ತ ಡಿಸಿಎಂ ಲಕ್ಷ್ಮಣ ಸವದಿ ಅವರು ಸಹ ಕೇವಲ ಬಜೆಟ್ ಬಗ್ಗೆ ಮಾತನಾಡಿದ್ದು, ಮಹಿಳೆಯರು ಮತ್ತು ರೈತರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಕೊರೊನಾ ಕಾಲದಲ್ಲಿ ಇದೊಂದು ಉತ್ತಮ‌ ಬಜೆಟ್ ಎಂದ ಅವರು, ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣದ ಕುರಿತು ಪ್ರತಿಕ್ರಿಯೆಗೆ ನೀಡಲು ನಿರಾಕರಿಸಿದರು.

ABOUT THE AUTHOR

...view details