ಬೆಳಗಾವಿ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
'ಬಿಜೆಪಿಗೆ ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅಗತ್ಯವಿದೆ, ಕಾಂಗ್ರೆಸ್‌ಗಿಲ್ಲ' - ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಿಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ
ಭ್ರಷ್ಟಾಚಾರ, ಬೆಲೆ ಏರಿಕೆಯನ್ನು ಡೈವರ್ಟ್ ಮಾಡಲು ಬಿಜೆಪಿ ಪಕ್ಷಕ್ಕೆ ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅನಿವಾರ್ಯತೆಯಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, 'ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರಿಂದಾಗಿ ಗುತ್ತಿಗೆದಾರ ಸಂತೋಷ ಪಾಟೀಲ ಸಾವಾಗಿದೆ. ಇಂದು ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂತೋಷ್ ಕುಟುಂಬದ ಜತೆಗೆ ನಿಂತಿದೆ. ಇದು ರಾಜ್ಯಕೀಯವಲ್ಲ. ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅನಿವಾರ್ಯ ನಮ್ಮ ಪಕ್ಷಕ್ಕೆ ಬಂದಿಲ್ಲ. ಇದರ ಅವಶ್ಯಕತೆ ಬಿಜೆಪಿಗಿದೆ' ಎಂದರು.
ಇದನ್ನೂ ಓದಿ:ನೂರಕ್ಕೆ ನೂರರಷ್ಟು ನಾನು ರಾಜೀನಾಮೆ ಕೊಡುವುದಿಲ್ಲ; ಸಚಿವ ಈಶ್ವರಪ್ಪ