ಕರ್ನಾಟಕ

karnataka

ETV Bharat / city

ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: 22 ಶಾಲೆಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಣೆ - ಕಟ್ಟಡ ಕಾರ್ಮಿಕನ ಮೇಲೆ ಚಿರತೆ ದಾಳಿ

ಬೆಳಗಾವಿ ನಗರದ ಹಿಂಡಲಗಾ ರಸ್ತೆಯ ವನಿತಾ ವಿದ್ಯಾಲಯ ಬಳಿಯ ಡಬಲ್ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಚಿರತೆ ಪತ್ತೆಯಾಗಿದೆ.

Leopard found in in Belagavi
ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

By

Published : Aug 22, 2022, 10:04 AM IST

ಬೆಳಗಾವಿ: ಕಳೆದ 18 ದಿನಗಳಿಂದ‌ ನಾಪತ್ತೆಯಾಗಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ. ‌ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರ ಮತ್ತು ಗ್ರಾಮೀಣ ಭಾಗದ ವ್ಯಾಪ್ತಿಯ 22 ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ..

ನಗರದ ಹಿಂಡಲಗಾ ರಸ್ತೆಯ ವನಿತಾ ವಿದ್ಯಾಲಯ ಬಳಿಯ ಡಬಲ್ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಚಿರತೆ ಕಾಣಿಸಿಕೊಂಡಿದೆ. ಬಸ್ ಚಾಲಕರೊಬ್ಬರು ವನ್ಯಜೀವಿಯ ಓಡಾಟದ ದೃಶ್ಯವನ್ನು ತಮ್ಮ ಮೊಬೈಲ್​​ನಲ್ಲಿ ಸೆರೆ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸೋಮವಾರ (ಆ.22) ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯಲ್ಲಿನ 22 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ತಿಳಿಸಿದ್ದಾರೆ.

ನಗರದ ಜಾಧವ್ ನಗರದಲ್ಲಿ ಕಳೆದ ಆ.5 ರಂದು ಚಿರತೆ ಪತ್ತೆ ಆಗಿತ್ತು. ಈ ವೇಳೆ ಕಟ್ಟಡ ಕಾರ್ಮಿಕನ ಮೇಲೆ ದಾಳಿ ಮಾಡಿ ಬೆಳಗಾವಿ ಗಾಲ್ಫ್ ಮೈದಾನದಲ್ಲಿ ಹೋಗಿದೆ. ಕಳೆದ 18 ದಿನಗಳಿಂದ ಸೆರೆಗೆ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ; ಮುಂದುವರಿದ ಶೋಧ ಕಾರ್ಯ

ನಗರ ಪ್ರದೇಶದಲ್ಲಿದ್ದರೂ ಚಿರತೆ ಹಿಡಿಯುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾಟಾಚಾರದ ಪತ್ತೆ ಕಾರ್ಯ ಮಾಡುತ್ತಿದ್ದಾರೆ ಎಂಬ ಆರೋಪವೂ ಇದೆ. ರಾತ್ರಿ ಹೊತ್ತಿನಲ್ಲಿ ಗಾಲ್ಫ್ ಮೈದಾನದಿಂದ ಹೊರಗೆ ಬರುತ್ತಿದೆ. ಹೀಗಾಗಿ, ಬೆಳಗಾವಿ ಕ್ಯಾಂಪ್, ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಜನರಲ್ಲಿ ಭಯದ ವಾತಾವರಣ ಮನೆ ಮಾಡಿದೆ.

ಇದನ್ನೂ ಓದಿ:ಬೆಳಗಾವಿ ಗಾಲ್ಫ್ ಮೈದಾನದಲ್ಲಿ ಚಿರತೆ ಚಲನವಲನ ಪತ್ತೆ

ABOUT THE AUTHOR

...view details