ಬೆಳಗಾವಿ:ಕೂಡಲಸಂಗಮ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಲಿಂಗಾಯತ ಪಂಚಮಸಾಲಿಗೆ ಹೋರಾಟಕ್ಕೆ ಬೆಂಬಲ ನೀಡುತ್ತಾರೋ ಅಥವಾ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟಕ್ಕೋ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಲಿಂಗಾಯತ ಪಂಚಮಸಾಲಿ ಮುಖಂಡರು ಆಗ್ರಹಿಸಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮವೋ, 2ಎ ಮೀಸಲಾತಿಯೋ.. ಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟಪಡಿಸಲು ಆಗ್ರಹ - ಲಿಂಗಾಯತ ಪಂಚಮಸಾಲಿ ಮುಖಂಡ ಯಲ್ಲಪ್ಪ ಹೆಗಡೆ
ಸ್ವತಂತ್ರ ಲಿಂಗಾಯತ ಧರ್ಮಕ್ಕೆ ಮಾನ್ಯತೆ ಸಿಗಬೇಕೆಂದು ಹೋರಾಟ ನಡೆಸಿದ್ದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಇದೀಗ ಕೇವಲ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆಸಿರುವುದು ಲಿಂಗಾಯತ ಸಮಾಜದವರಲ್ಲಿ ಗೊಂದಲ ಮೂಡಿಸಿದೆ..
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಿಂಗಾಯತ ಪಂಚಮಸಾಲಿ ಮುಖಂಡ ಯಲ್ಲಪ್ಪ ಹೆಗಡೆ, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಭಾಗಿಯಾಗಿದ್ದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಇತ್ತೀಚೆಗೆ ನಡೆಸಿದ ಉಪವಾಸ ಧರಣಿಯಿಂದ ಲಿಂಗಾಯತ ಸಮಾಜದವರು ಗೊಂದಲದಲ್ಲಿ ಸಿಲುಕಿಸಿದ್ದಾರೆ.
ಸ್ವತಂತ್ರ ಲಿಂಗಾಯತ ಧರ್ಮಕ್ಕೆ ಮಾನ್ಯತೆ ಸಿಗಬೇಕೆಂದು ಹೋರಾಟ ನಡೆಸಿದ್ದ ಸ್ವಾಮೀಜಿ, ಇದೀಗ ಕೇವಲ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆಸಿದ್ದಾರೆ. ಹೀಗಾಗಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಲಿಂಗಾಯತ ಪಂಚಮಸಾಲಿಗೆ ಹೋರಾಟಕ್ಕೆ ಬೆಂಬಲ ನೀಡುತ್ತಾರೋ ಅಥವಾ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟಕ್ಕೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.