ಕರ್ನಾಟಕ

karnataka

ETV Bharat / city

ಲೋಕಸಭಾ ಚುನಾವಣೆ: ಬೆಳಗಾವಿ ಜಿಲ್ಲೆಯಲ್ಲಿ ಮತಯಂತ್ರ, ವಿವಿಪ್ಯಾಟ್​ಗಳ​ ಹಂಚಿಕೆ - ಬೆಳಗಾವಿ

ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಮತಯಂತ್ರ, ವಿವಿಪ್ಯಾಟ್​ಗಳ​ ಹಂಚಿಕೆ ಮಾಡಲಾಯಿತು.

ಮತಯಂತ್ರ, ವಿವಿಪ್ಯಾಟ್​ಗಳ​ ಹಂಚಿಕೆ

By

Published : Mar 21, 2019, 8:38 AM IST

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯನ್ನು ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಮಾನ್ಯತೆ ಪಡೆದ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳು ಮತ್ತು ವಿವಿಪ್ಯಾಟ್​ಗಳನ್ನು ಹಂಚಿಕೆ ಮಾಡಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಂಡಮೈಜೇಷನ್ ಪ್ರಕ್ರಿಯೆಯಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರವಾರು ಒಟ್ಟು 5099 ಬ್ಯಾಲೆಟ್ ಯೂನಿಟ್​ಗಳು, 5099 ಕಂಟ್ರೋಲ್ ಯೂನಿಟ್​ಗಳು ಮತ್ತು 5321 ವಿವಿಪ್ಯಾಟ್ ಯಂತ್ರಗಳನ್ನು ಹಂಚಿಕೆ ಮಾಡಲಾಯಿತು.

ಲೋಕಸಭಾ ಚುನಾವಣೆಗಾಗಿ ಜಿಲ್ಲೆಯಲ್ಲಿ ಒಟ್ಟು 4434 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಮತಗಟ್ಟೆಗಳ ಸಂಖ್ಯೆಯ ಜತೆಗೆ 665 (ಶೇ.15)ರಷ್ಟು ಅಧಿಕ ಬ್ಯಾಲೆಟ್ ಯೂನಿಟ್, 665 (ಶೇ. 15) ರಷ್ಟು ಅಧಿಕ ಕಂಟ್ರೋಲ್ ಯೂನಿಟ್​ ಮತ್ತು 887 (ಶೇ. 20) ರಷ್ಟು ವಿವಿಪ್ಯಾಟ್​ಗಳನ್ನು ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಯಿತು.

ಮತಯಂತ್ರ ಹಂಚಿಕೆ ಪಾರದರ್ಶಕ:

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ, ಮತಯಂತ್ರಗಳ ಹಂಚಿಕೆಯು ಸಂಪೂರ್ಣ ಕಂಪ್ಯೂಟರೀಕೃತವಾಗಿದ್ದು, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಅತ್ಯಂತ ಪಾರದರ್ಶಕತೆಯಿಂದ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ABOUT THE AUTHOR

...view details