ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಮರಳು ತುಂಬಿದ ಲಾರಿ ಹರಿದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಪೋರ್ಟ್ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ನಗರದ ಸಾಬೀಯಾ ಶಬ್ಬೀರ್ ಅಹಮದ್ ಪಾಳೇಗಾರ (16) ಮೃತ ವಿದ್ಯಾರ್ಥಿನಿ.
ಇಂದು ಬೆಳಗ್ಗೆ ಎಂದಿನಂತೆ ಸಮವಸ್ತ್ರ ಧರಿಸಿ ಪೋರ್ಟ್ ರಸ್ತೆ ಮೂಲಕ ಭರತೇಶ ಕಾಲೇಜಿಗೆ ಹೋಗುವ ಸಂದರ್ಭದಲ್ಲಿ ವಿದ್ಯಾರ್ಥಿನಿ ಮೇಲೆ ಮರಳು ತುಂಬಿದ ಲಾರಿ ಹರಿದಿದೆ. ಪರಿಣಾಮ, ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮಾರ್ಕೆಟ್ ಪೊಲೀಸರು ಮತ್ತು ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.