ಕರ್ನಾಟಕ

karnataka

ETV Bharat / city

ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಬೆಂಬಲಿಸಲು ‌ಮಹಾರಾಷ್ಟ್ರ ಸರ್ಕಾರ ನಿರ್ಧಾರ - ಕರ್ನಾಟಕ ರಾಜ್ಯೋತ್ಸವ

ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಬೆಂಬಲಿಸಲು ಸಂಪುಟ ಸಭೆಯಲ್ಲಿ ‌ಮಹಾರಾಷ್ಟ್ರ ಸರ್ಕಾರ ನಿರ್ಧಾರಿಸಿದೆ. ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ದಿನದಂದೇ ಎಂಇಎಸ್ ಕರಾಳ ದಿನ ಆಚರಿಸುತ್ತಾ ಬಂದಿದೆ.

mh
mh

By

Published : Oct 30, 2020, 8:59 AM IST

ಬೆಳಗಾವಿ:ಕರ್ನಾಟಕ - ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಶಿವಸೇನೆ ಮತ್ತೆ ಕ್ಯಾತೆ ತೆಗೆದಿದೆ. ಎಂಇಎಸ್ ಕರಾಳ ದಿನಾಚರಣೆಗೆ ಬೆಂಬಲಿಸಲು ಮಹಾರಾಷ್ಟ್ರ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.

ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ದಿನದಂದೇ ಎಂಇಎಸ್ ಕರಾಳ ದಿನ ಆಚರಿಸುತ್ತಾ ಬಂದಿದೆ. ಎಂಇಎಸ್ ಕರಾಳ ದಿನಾಚರಣೆ ಬೆಂಬಲಿಸಲು ಮಹಾರಾಷ್ಟ್ರದ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಂಬೈನಲ್ಲಿ ‌ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಏಕನಾಥ ಶಿಂಧೆ ಹೇಳಿಕೆ ನೀಡಿದ್ದಾರೆ.

ನ. 1ರಂದು ಮಹಾರಾಷ್ಟ್ರ ಸಚಿವರೆಲ್ಲರೂ ಕಪ್ಪು ಪಟ್ಟಿ ಧರಿಸಲು ನಿರ್ಧರಿಸಿದ್ದಾರೆ. ಮರಾಠಿ ಭಾಷಿಕರ ಮೇಲೆ ಕರ್ನಾಟಕ ಸರ್ಕಾರ ನಿರಂತರ ಅನ್ಯಾಯ, ದಬ್ಬಾಳಿಕೆ ಮಾಡ್ತಿದೆ. ಮರಾಠಿ ಭಾಷಿಕರ ಧ್ವನಿ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ಸರ್ಕಾರ ಕಾನೂನು ಹೋರಾಟ ಮುಂದುವರೆಸಲಿದೆ.

ಆದಷ್ಟು ಬೇಗ ಮರಾಠಿ ಭಾಷಿಕರಿಗೆ ನ್ಯಾಯ ಸಿಗುವ ವಿಶ್ವಾಸವಿದೆ. ಮಂತ್ರಿ ಮಂಡಲದ ಎಲ್ಲಾ ಸದಸ್ಯರು ಕರಾಳ ದಿನಾಚರಣೆಗೆ ಬೆಂಬಲ ನೀಡುತ್ತೇವೆ. ನವೆಂಬರ್ 1ರಂದು ಎಲ್ಲಾ ಸಚಿವರು ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡ್ತೇವೆ. ಮರಾಠಿ ಭಾಷಿಕರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸಚಿವ ಏಕನಾಥ ‌ಶಿಂಧೆ ಹೇಳಿದ್ದಾರೆ.

ಅಷ್ಟೇ ಅಲ್ಲದೆ ಕರ್ನಾಟಕದ ಮರಾಠಿ ಭಾಷಿಕರನ್ನುದ್ದೇಶಿಸಿ ಅವರು ಪತ್ರ ಬರೆದಿದ್ದಾರೆ. ಗಡಿ ಉಸ್ತುವಾರಿ ಮಂತ್ರಿಗಳಾದ ಏಕನಾಥ ಶಿಂಧೆ, ಛಗನ್ ಭುಜಬಲ್ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಉದ್ಧಟತನಕ್ಕೆ ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ನವೆಂಬರ್ 1ರಂದು ಎಂಇಎಸ್‌ಗೆ ಕರಾಳ ದಿನ ಆಚರಣೆಗೆ ಅನುಮತಿ ನೀಡದಂತೆ ಕನ್ನಡ ಸಂಘಟನೆಗಳು ಜಿಲ್ಲಾಡಳಿತವನ್ನು ಒತ್ತಾಯಿಸಿವೆ.

ABOUT THE AUTHOR

...view details