ಅಥಣಿ: ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಮಹೇಶ್ ಕುಮಟಳ್ಳಿ ಅವರಿಗೆ ಎರಡನೇ ಬಾರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಎರಡನೇ ಬಾರಿಗೆ ಶಾಸಕ ಮಹೇಶ್ ಕುಮಟಳ್ಳಿ ತಗುಲಿದ ಕೊರೊನಾ - ಶಾಸಕ ಮಹೇಶ್ ಕುಮಟಳ್ಳಿಗೆ ಕೊರೊನಾ
ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ್ ಕುಮಟಳ್ಳಿ ಅವರಿಗೆ ಎರಡನೇ ಬಾರಿಗೆ ಕೋವಿಡ್ ಸೋಂಕು ತಗುಲಿದ್ದು, ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.
ಶಾಸಕ ಮಹೇಶ್ ಕುಮಟಳ್ಳಿ
'ಇಂದು ಬೆಳಗ್ಗೆ ಕೋವಿಡ್ ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಎಂದು ದೃಢಪಟ್ಟಿದೆ. ನಾನು ವೈದ್ಯರ ಸಲಹೆಯಂತೆ ವೈದ್ಯಕೀಯ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯದ ಕಡೆಗೆ ನಿಗಾವಹಿಸಿ ಹಾಗೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ. ಆದಷ್ಟು ಬೇಗ ಗುಣಮುಖನಾಗಿ ಬಂದು ಎಂದಿನಂತೆ ಕಾರ್ಯ ಪ್ರವೃತ್ತನಾಗಲಿದ್ದೇನೆಂದು' ತಮ್ಮ ಪೇಸ್ ಬುಕ್ ಪೇಜ್ನಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
Last Updated : Apr 12, 2021, 5:33 PM IST