ಕರ್ನಾಟಕ

karnataka

ETV Bharat / city

ಬೆಳಗಾವಿಯಲ್ಲಿ ಒಡಹುಟ್ಟಿದ ಅಣ್ಣನ‌ ಮೇಲೆ‌ ತಮ್ಮನಿಂದ ಮಾರಣಾಂತಿಕ ಹಲ್ಲೆ - ಬೆಳಗಾವಿ ಸುದ್ದಿ

ನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಸಹೋದರನನ್ನು ಪ್ರಶ್ನಿಸಿದ ಅಣ್ಣನ ಮೇಲೆ ತಮ್ಮನೋರ್ವ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಟಿಳಕವಾಡಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

man-fatal-assault-on-his-elder-brother
ಮಾರಣಾಂತಿಕ ಹಲ್ಲೆ

By

Published : Oct 31, 2021, 3:42 PM IST

ಬೆಳಗಾವಿ: ಒಡಹುಟ್ಟಿದ ಅಣ್ಣನ ಮೇಲೆಯೇ ತಮ್ಮನೋರ್ವ ಮಾರಣಾಂತಿಕ ‌ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ನಗರದ ಟಿಳಕವಾಡಿಯಲ್ಲಿ ಶನಿವಾರ ತಡರಾತ್ರಿ‌ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆ ಅಣ್ಣನ ಮೇಲೆ ತಮ್ಮನೇ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಪ್ರಕಾಶ್ ಮಜುಕರ(55) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿತ್ಯವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಸಹೋದರನನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For All Latest Updates

TAGGED:

ABOUT THE AUTHOR

...view details