ಬೆಳಗಾವಿ:ತೆರವುಗೊಳಿಸಿದ್ದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಮರು ಸ್ಥಾಪಿಸುವಂತೆ ಆಗ್ರಹಿಸಿ ಹಾಲುಮತ ಸಮಾಜದ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಸ್ಥಾಪನೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಆಗಸ್ಟ್ 15ರಂದು ತೆರವುಗೊಳಿಸಿದ್ದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಮರು ಸ್ಥಾಪಿಸುವಂತೆ ಆಗ್ರಹಿಸಿ ಹಾಲುಮತ ಸಮಾಜದ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ನಗರದ ಕಾಂಗ್ರೆಸ್ ರಸ್ತೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ರಾಯಣ್ಣನ ಅಭಿಮಾನಿಗಳು, ಪೀರನವಾಡಿಯಲ್ಲಿ ಸರ್ಕಾರವೇ ತಕ್ಷಣ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಬೇಕು. ಇಲ್ಲವಾದರೆ ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳೀಯರಿಗೆ ಅವಕಾಶ ನೀಡಬೇಕು. ಒಂದು ವೇಳೆ ಪ್ರತಿಮೆ ಪ್ರತಿಷ್ಠಾಪನೆ ಮಾಡದಿದ್ರೆ, ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಈ ಸಂಬಂಧ ಹಾಲುಮತ ಸಮಾಜದ ಮುಖಂಡರು ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ಬೆಳಗಾವಿ ಹೊರವಲಯದ ಪೀರನವಾಡಿಯ ವೃತ್ತದಲ್ಲಿ ಆಗಸ್ಟ್ 15ರಂದು ಅನುಮತಿಯಿಲ್ಲದೇ, ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಅನುಮತಿ ಪಡೆಯದ ಕಾರಣ ನಗರ ಪೊಲೀಸರು ಮೂರ್ತಿ ತೆರವು ಮಾಡಿದ್ದರು.