ಕರ್ನಾಟಕ

karnataka

ETV Bharat / city

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮೇ. 20 ರಂದು ರೈತ ಸಂಘಟನೆಗಳಿಂದ ಪ್ರತಿಭಟನೆ - undefined

ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿಗೆ ಬಿಡಬೇಕಾದ ನೀರಿಗೆ ವಿಳಂಬ ನೀತಿ ಅನುಸರಿಸುತ್ತಿರುವ ಕುರಿತು ಚಿಂಚಣಿಯ ಶ್ರೀ ಅಲ್ಲಮಪ್ರಭು ಸ್ವಾಮೀಜಿಗಳು ಮತ್ತು ಚಿಕ್ಕೋಡಿಯ ಶ್ರೀ ಸಂಪಾದನಾ ಮಹಾಸ್ವಾಮಿಗಳ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕೋಡಿ ತಾಲೂಕ ಘಟಕದ ಮುಂದಾಳತ್ವದಲ್ಲಿ ಮೇ. 20 ರಂದು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಚಿಕ್ಕೋಡಿ ತಾಲೂಕ್​ ರಕ್ಷಣಾ ವೇದಿಕೆ ಅಧ್ಯಕ್ಷರ ನಾಗೇಶ ಮಾಳಿ

By

Published : May 19, 2019, 5:13 AM IST

ಚಿಕ್ಕೋಡಿ :ಮಹಾರಾಷ್ಟ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಬಿಡಬೇಕಾದ ನೀರಿಗೆ ವಿಳಂಬ ನೀತಿ ಅನುಸರಿಸುತ್ತಿದ್ದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮೇ. 20 ರಂದು ಮುಂಜಾನೆ 11 ಗಂಟೆಗೆ ಅಂಕಲಿ ಮತ್ತು ಮಾಂಜರಿ ನಡುವಿನ ಸೇತುವೆ ಮೇಲೆ ಉಗ್ರ ಹೋರಾಟ ಮಾಡಲಾಗುವುದು ಎಂದು ಕರವೇ ಹಾಗೂ ರೈತ ಸಂಘಟನೆಗಳು ಕರೆ ನೀಡಿವೆ.

ಚಿಕ್ಕೋಡಿ ತಾಲೂಕ್​ ರಕ್ಷಣಾ ವೇದಿಕೆ ಅಧ್ಯಕ್ಷರ ನಾಗೇಶ ಮಾಳಿ

ಚಿಂಚಣಿಯ ಶ್ರೀ ಅಲ್ಲಮಪ್ರಭು ಸ್ವಾಮೀಜಿಗಳು ಮತ್ತು ಚಿಕ್ಕೋಡಿಯ ಶ್ರೀ ಸಂಪಾದನಾ ಮಹಾಸ್ವಾಮಿಗಳ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕೋಡಿ ತಾಲೂಕ ಘಟಕದ ಮುಂದಾಳತ್ವದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅಥಣಿ, ರಾಯಬಾಗ, ಚಿಕ್ಕೋಡಿ, ಕಾಗವಾಡ, ಕುಡಚಿಯ ಎಲ್ಲ ಕರವೇ ಅಧ್ಯಕ್ಷರು, ಕಾರ್ಯಕರ್ತರು ಹಾಗೂ ರೈತರು ಪಾಲ್ಗೊಳ್ಳುತ್ತಾರೆ. ಜೊತೆಗೆ ಸಾವಿರಾರು ರೈತರು ಪಾಲ್ಗೊಳ್ಳುವಂತೆ ಕರೆ ನೀಡಲಾಗಿದೆ ಎಂದು ಚಿಕ್ಕೋಡಿ ತಾಲೂಕ್​ ರಕ್ಷಣಾ ವೇದಿಕೆ ಅಧ್ಯಕ್ಷರ ನಾಗೇಶ ಮಾಳಿ ತಿಳಿಸಿದರು.

For All Latest Updates

TAGGED:

ABOUT THE AUTHOR

...view details