ಬೆಳಗಾವಿ: ಲಾಕ್ಡೌನ್ ಬಂದೋಬಸ್ತ್ ವೇಳೆ ಕಾರ್ಯ ನಿರ್ವಹಿಸುತ್ತಿದ್ದ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಮನೋಹರ ಗಣಾಚಾರಿ ಅಪಘಾತದಲ್ಲಿ ಮೃತಪಟ್ಟಿದ್ದು, ಸಚಿವ ಜಗದೀಶ್ ಶೆಟ್ಟರ್ ಹಾಗೂ ಸುರೇಶ್ ಅಂಗಡಿ ಅಂತಿಮ ನಮನ ಸಲ್ಲಿಸಿದರು.
ಅಪಘಾತದಲ್ಲಿ ಮೃತಪಟ್ಟ ಪಿಎಸ್ಐ: ಸಚಿವ ಶೆಟ್ಟರ್ರಿಂದ ಅಂತಿಮ ನಮನ - Minister Jagadish Shettar news
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಲಾಕ್ಡೌನ್ ಬಂದೋಬಸ್ತ್ಗಾಗಿ ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಮನೋಹರ ಗಣಾಚಾರಿ ಅವರನ್ನು ನಿಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಅವರು ಮೃತಪಟ್ಟಿದ್ದು, ಸಚಿವ ಜಗದೀಶ್ ಶೆಟ್ಟರ್ ಹಾಗೂ ಸುರೇಶ್ ಅಂಗಡಿ ಅಂತಿಮ ನಮನ ಸಲ್ಲಿಸಿದರು.
ಪಿಎಸ್ಐ ಶರೀರಕ್ಕೆ ಸಚಿವ ಶೆಟ್ಟರ್ ಅಂತಿಮ ನಮನ
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಲಾಕ್ಡೌನ್ ಬಂದೋಬಸ್ತ್ಗಾಗಿ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಮನೋಹರ ಗಣಾಚಾರಿ ಅವರನ್ನು ನಿಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಅವರು ಮೃತಪಟ್ಟಿದ್ದು, ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಪಠಾಣ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಡಿಸಿಪಿ ಸೀಮಾ ಲಾಟ್ಕರ್, ಹಿರಿಯ ಅಧಿಕಾರಿಗಳು ಕೂಡಾ ಶ್ರದ್ಧಾಂಜಲಿ ಸಲ್ಲಿಸಿದರು.