ಬೆಳಗಾವಿ :ಮಹಾರಾಷ್ಟ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆ ನೆರೆ ನಿರ್ವಹಣೆ ಸಂಬಂಧ ಚರ್ಚೆಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ದಿಢೀರ್ ಮಹಾರಾಷ್ಟ್ರಕ್ಕೆ ತೆರಳಿದ್ದಾರೆ.
ನೆರೆ ನಿರ್ವಹಣೆ ಸಂಬಂಧ ಚರ್ಚಿಸಲು ದಿಢೀರ್ ಮಹಾರಾಷ್ಟ್ರಕ್ಕೆ ತೆರಳಿದ ರಮೇಶ್ ಜಾರಕಿಹೊಳಿ - ಸಂಜಯ್ ಕಾಕಾ ಪಾಟೀಲ್
ಮಹಾರಾಷ್ಟ್ರದ ಸಾಂಗ್ಲಿ ಕ್ಷೇತ್ರದ ಲೋಕಸಭಾ ಸದಸ್ಯ ಸಂಜಯ್ ಕಾಕಾ ಪಾಟೀಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ನೆರೆ ನಿರ್ವಹಣೆಗೆ ಈಗಾಗಲೇ ಎರಡೂ ರಾಜ್ಯಗಳ ಅಧಿಕಾರಿಗಳ ಸಮನ್ವಯ ಸಮಿತಿ ರಚಿಸಲಾಗಿದೆ..

ನೆರೆ ನಿರ್ವಹಣೆ ಸಂಬಂಧ ಚರ್ಚಿಸಲು ದಿಢೀರ್ ಮಹಾರಾಷ್ಟ್ರಕ್ಕೆ ತೆರಳಿದ ರಮೇಶ್ ಜಾರಕಿಹೊಳಿ
ಮಹಾರಾಷ್ಟ್ರದ ಸಾಂಗ್ಲಿ ಕ್ಷೇತ್ರದ ಲೋಕಸಭಾ ಸದಸ್ಯ ಸಂಜಯ್ ಕಾಕಾ ಪಾಟೀಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ನೆರೆ ನಿರ್ವಹಣೆಗೆ ಈಗಾಗಲೇ ಎರಡೂ ರಾಜ್ಯಗಳ ಅಧಿಕಾರಿಗಳ ಸಮನ್ವಯ ಸಮಿತಿ ರಚಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅನುವಾಗುವಂತೆ ಉಭಯ ನಾಯಕರು ಚರ್ಚಿಸಿದ್ದೇವೆ ಎಂದು ಸಚಿವ ಜಾರಕಿಹೊಳಿ ತಿಳಿಸಿದ್ದಾರೆ.
ಸಭೆಯಲ್ಲಿ ರಾಜ್ಯದ ಜವಳಿ ಸಚಿವ ಶ್ರೀಮಂತ್ ಪಾಟೀಲ್ ಕೂಡ ಉಪಸ್ಥಿತರಿದ್ದರು.