ಬೆಳಗಾವಿ:ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿಗೆ ಕೊಡಬೇಕು. ಈ ಬಗ್ಗೆ ನಾನು ಸಹ ಸಿಎಂಗೆ ಒತ್ತಾಯ ಮಾಡುತ್ತೇನೆ ಎಂದು ಸಚಿವ ಶ್ರೀಮಂತ್ ಪಾಟೀಲ ಹೇಳಿದರು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಹೇಳಿದಂತೆ ಸಿಡಿ ಪ್ರಕರಣದ ಬಗ್ಗೆ ಆದಷ್ಟು ಬೇಗ ಉನ್ನತ ಮಟ್ಟದ ತನಿಖೆಯಾಗಬೇಕು. ರಮೇಶ್ ಒಳ್ಳೆಯ ಮನುಷ್ಯ. ನನ್ನ ಅಭಿಪ್ರಾಯದಂತೆ ಅವರಿಗೆ ಕ್ಲೀನ್ ಚಿಟ್ ಸಿಗಬಹುದು. ಹೀಗಾಗಿ, ಸಮಗ್ರ ತನಿಖೆ ಆಗಬೇಕು. ಪ್ರಕರಣದಲ್ಲಿ ಯಾರಿದ್ದಾರೋ ಅವರಿಗೆ ಶಿಕ್ಷೆಯಾಗಬೇಕು ಎಂಬುದು ಎಲ್ಲರ ಒತ್ತಾಯವಾಗಿದೆ ಎಂದರು.