ಬೆಳಗಾವಿ :ಒಮಿಕ್ರಾನ್ ಪೀಡಿತ ಮೂರನೇ ವ್ಯಕ್ತಿಯ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ನಾವು ಈಗಾಗಲೇ ತಪಾಸಣೆಗೆ ಒಳಪಡಿಸಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಒಮಿಕ್ರಾನ್ ಸೋಂಕಿತರ ಕುರಿತು ಸುಧಾಕರ್ ಮಾಹಿತಿ: ನಗರದ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಒಮಿಕ್ರಾನ್ ಪೀಡಿತರ ಆರೋಗ್ಯ ತಪಾಸಣೆ ಮಾಡಿ ವರದಿ ಪಡೆದಿದ್ದೇವೆ. ಕೋವಿಡ್ ಸೋಂಕಿತರಾಗಿ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ರೋಗಿಗಳು ಗುಣಮುಖರಾಗುತ್ತಿದ್ದಾರೆ. ಯಾರಿಗೂ ಕೂಡ ಯಾವುದೇ ರೀತಿಯ ಸಮಸ್ಯೆ ಕಾಡಿಲ್ಲ. ಅತ್ಯಂತ ಪ್ರಮುಖವಾಗಿ ನಾವು ವಿದೇಶದಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ವಹಿಸಿದ್ದೇವೆ. ಪ್ರತಿಯೊಬ್ಬರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸುವ ಕಾರ್ಯ ಆಗುತ್ತಿದೆ ಎಂದರು.