ಖಾನಾಪುರ (ಬೆಳಗಾವಿ) :ಶುಕ್ರವಾರ ಬೆಳಗಾವಿಯ ಆನಗೋಳದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಅವಮಾನ ಪ್ರಕರಣದ ಬೆನ್ನಲ್ಲೇ ಇದೀಗ ಜಿಲ್ಲೆಯ ಖಾನಾಪುರ ತಾಲೂಕಿನ ಐತಿಹಾಸಿಕ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ.
ಧ್ವಜಸ್ತಂಭದ ಮೇಲಿನ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಲಾಗಿದೆ. ಧ್ವಜಕಟ್ಟೆಯ ಮೇಲಿದ್ದ ಜಗಜ್ಯೋತಿ ಬಸವಣ್ಣರ ಚಿತ್ರಕ್ಕೆ ಕೂಡ ಅಪಮಾನ ಮಾಡಿ ಉದ್ಧಟತನ ಪ್ರದರ್ಶಿಸಿದ್ದಾರೆ. ರಾಜ್ಯದಲ್ಲೇ ಧ್ವಜಕ್ಕೆ ಅಪಮಾನ ಮಾಡಿರುವುದು ಕನ್ನಡ ಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.