ಬೆಳಗಾವಿ: ಸಿಎಂ ಬದಲಾವಣೆ ವಿಚಾರದ ಕುರಿತು ಇಲ್ಲಿಯವರೆಗೆ ನಮ್ಮನ್ನು ಯಾರೂ ಸಂಪರ್ಕ ಮಾಡಿಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಹೇಳಿದರು.
ಸಿಎಂ ಬದಲಾವಣೆ ವಿಚಾರ ಕುರಿತು ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಅನಿಲ್ ಬೆನಕೆ - ನಳಿನ್ ಕುಮಾರ್ ಕಟೀಲ್ ಅವರ ಅಡಿಯೋ ವೈರಲ್
ಸಿಎಂ ಬದಲಾವಣೆ ಕುರಿತು ಇಲ್ಲಿಯವರೆಗೆ ನಮ್ಮನ್ನು ಯಾರೂ ಸಂಪರ್ಕ ಮಾಡಿಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಧ್ವನಿ ಎನ್ನಲಾದ ಅಡಿಯೋ ವೈರಲ್ ಆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಳಿನ್ ಕುಮಾರ್ ಕಟೀಲ್ ಅವರ ಅಡಿಯೋ ವೈರಲ್ ಆಗಿರುವ ಬಗ್ಗೆ ಪತ್ರಿಕೆಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಿನ್ನೆ ಸಿಎಂ ದೆಹಲಿಗೆ ಭೇಟಿ ನೀಡಿ ಬಂದಿದ್ದಾರೆ. ದೆಹಲಿ ಭೇಟಿಗೂ, ಸಿಎಂ ಬದಲಾವಣೆಗೂ ಸಂಬಂಧವಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರೇ ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ ಈ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಇನ್ನು ನಾನು ಬೆಳಗಾವಿಯಲ್ಲಿ ಇದ್ದೇನೆ. ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ಸಿಎಂ ಬದಲಾವಣೆ ಬಗ್ಗೆ ಇಲ್ಲಿಯವರೆಗೆ ನಮ್ಮನ್ನು ಯಾರೂ ಸಂಪರ್ಕ ಮಾಡಿಲ್ಲ ಎಂದು ಅನಿಲ್ ಬೆನಕೆ ಸ್ಪಷ್ಟಪಡಿಸಿದರು.