ಬೆಳಗಾವಿ :ಸಚಿವ ಉಮೇಶ್ ಕತ್ತಿ ಹಾಗೂ ಬಿಜೆಪಿ ಉಪಾಧ್ಯಕ್ಷ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದಿದ್ದ ಜಿಲ್ಲಾ ಬಿಜೆಪಿ ನಾಯಕರ ರಹಸ್ಯ ಸಭೆಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಬೆಳಗಾವಿ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಉದ್ಧೇಶ ಪೂರ್ವಕವಾಗಿ ಯಾರನ್ನೂ ಹೊರಗಿಟ್ಟು ಸಭೆಯನ್ನು ನಡೆಸುವ ಅವಶ್ಯಕತೆ ಇರಲಿಲ್ಲ. ಅಲ್ಲದೇ ಇದು ಬಿಜೆಪಿಯ ಅಧಿಕೃತ ಸಭೆಯೂ ಅಲ್ಲ. ಹೀಗಾಗಿ, ಈ ಸಭೆಗೆ ಹೆಚ್ಚಿನ ಮಹತ್ವ ನೀಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ