ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವಲ್ಲಿ ಸಹಕರಿಸಿದ ಎಲ್ಲರಿಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ಟಿಕೆಟ್ ಘೋಷಣೆಯಿಂದ ಆರಂಭವಾಗಿ ಆಯ್ಕೆಯಾಗುವವರೆಗೂ ಹಲವಾರು ಜನರು ಸಹಕಾರ ನೀಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದಿದ್ದಾರೆ.
ಎಲ್ಲ ಮತದಾರರು, ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಜಿಲ್ಲೆಯ ಮುಖಂಡರಾದ ಪ್ರಕಾಶ್ ಹುಕ್ಕೇರಿ, ಎ.ಬಿ.ಪಾಟೀಲ್, ವೀರಕುಮಾರ್ ಪಾಟೀಲ್, ಅಶೋಕ ಪಟ್ಟಣ, ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.