ಕರ್ನಾಟಕ

karnataka

ETV Bharat / city

'ಕಿತ್ತೂರು ಕರ್ನಾಟಕ'ವೆಂದು ಮರುನಾಮಕರಣ: ಬೆಳಗಾವಿಯಲ್ಲಿ ವಿಜಯೋತ್ಸವ - belagavi district news

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡಲು ಒಪ್ಪಿಗೆ ಸಿಕ್ಕಿದೆ.

mumbai-karnataka-renamed-kittur-karnataka
ಕಿತ್ತೂರು ಕರ್ನಾಟಕ

By

Published : Nov 8, 2021, 7:13 PM IST

ಬೆಳಗಾವಿ: ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡುತ್ತಿದ್ದಂತೆ ಗಡಿ ಜಿಲ್ಲೆ ಬೆಳಗಾವಿಯ ವಿವಿಧೆಡೆ ವಿಜಯೋತ್ಸವ ಆಚರಿಸಲಾಯಿತು.


ಶಾಸಕ ಮಹಾಂತೇಶ ದೊಡ್ಡನಗೌಡರ, ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ವಿಜಯೋತ್ಸವ ನಡೆಸಲಾಯಿತು.

ಕಿತ್ತೂರು ಉತ್ಸವ ಉದ್ಘಾಟನೆ ಸಂದರ್ಭದಲ್ಲಿ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದರು. ಅಲ್ಲದೇ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿಯೂ ಭರವಸೆ ನೀಡಿದ್ದರು. ಇದೀಗ ಈ ಭಾಗದ ಜನರ ಬಹುದಿನದ ಕನಸು ನನಸಾಗಿದೆ. ಶಾಸಕ ಮಹಾಂತೇಶ್ ದೊಡ್ಡಗೌಡರ ಮತ್ತು ಕಿತ್ತೂರು ಜನ ಸಿಎಂಗೆ ಧನ್ಯವಾದ ಸಲ್ಲಿಸಿದ್ದಾರೆ.

ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಕನ್ನಡ ಪರ ಸಂಘಟನೆ ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಸ್ವಾಮೀಜಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.

ABOUT THE AUTHOR

...view details